ಲಕ್ನೋ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ. ಕಾರ್ಯಕ್ರಮವನ್ನು ಟಿವಿಯಲ್ಲೇ ವೀಕ್ಷಿಸಿ ಎಂದು ಭಕ್ತರಲ್ಲಿ ರಾಮಜನ್ಮಭೂಮಿ ಟ್ರಸ್ಟ್ ಮನವಿ ಮಾಡಿಕೊಂಡಿದೆ.
ಆಗಸ್ಟ್ ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಆದರೆ ಕೋವಿಡ್ 19 ನಿಂದಾಗಿ ಯಾರೂ ಅಯೋಧ್ಯೆಗೆ ಬರಬೇಡಿ. ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಿಸಿ. ಅಲ್ಲದೆ ಅಂದು ಸಜೆ ಎಲ್ಲರೂ ದೀಪ ಬೆಳಗಿ ಎಂದು ಟ್ರಸ್ಟ್ ತಿಳಿಸಿದೆ.
ರಾಮಮಂದಿರ ನಿರ್ಮಾಣವನ್ನು ಭೂಮಿ ಪೂಜೆಯ ಮೂಲಕ ಪ್ರಾರಂಭಿಸುವ ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 5ರಂದು ಅಯೋಧ್ಯೆಗೆ ಭೇಟಿ ನೀಡುವ ಸಾಧ್ಯತೆ ಇದೆ. 3 ಅಥವಾ 5ರಂದು ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಆಗಮಿಸುವಂತೆ ಈಗಾಗಲೇ ಪ್ರಧಾನಿಯವರಿಗೆ ಆಹ್ವಾನ ನೀಡಲಾಗಿದೆ ಎಂದು ಟ್ರಸ್ಟ್ ಸದಸ್ಯರು ಮಾಹಿತಿ ನಿಡಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!
ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಕೊರೊನಾ ವೈರಸ್ ಭೀತಿಯಿಂದಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮಮಂದಿರ ಭೂಮಿ ಪೂಜೆ ನೆರವೇರಿಸಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮ ಮಂದಿರ ಭೂಮಿ ಪೂಜೆಗೆ ವಿರೋಧ- ಉದ್ಧವ್ ಠಾಕ್ರೆ ಹೇಳಿಕೆಗೆ ವಿಎಚ್‍ಪಿ ಕಿಡಿ
ಭೂಮಿ ಪೂಜೆ ಕಾರ್ಯಕ್ರಮಕ್ಕೆ ನಾನು ಅಯೋಧ್ಯೆಗೆ ಹೋಗಬಲ್ಲೆ. ಆದರೆ ಲಕ್ಷಾಂತರ ರಾಮನ ಭಕ್ತರ ಕಥೆ ಏನು, ಅವರನ್ನು ನೀವು ತಡೆಯಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿಯೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಮಾಡಿ ಎಂದು ಉದ್ಧವ್ ಠಾಕ್ರೆ ತಿಳಿಸಿದ್ದರು. ಆದರೆ ಠಾಕ್ರೆ ಸಲಹೆಗೆ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಅಯೋಧ್ಯೆಗೆ ದಾಳಿ ಮಾಡಲು ಐಎಸ್‍ಐ ಸಂಚು – ಗುಪ್ತಚರ ಇಲಾಖೆ