– ಅಂಬಿ ಬಾಂಧವ್ಯದ ಬಗ್ಗೆ ಗೋಪಾಲಯ್ಯ ಮಾತು
– ಸ್ಮಾರಕಕ್ಕೆ ಬಂದ ನಟ ದರ್ಶನ್
ಬೆಂಗಳೂರು: ಮಂಡ್ಯದ ಜನ ಅಂಬರೀಶ್ ಅವರನ್ನು ವಿಶೇಷವಾಗಿ ದೇವರಂತೆ ಪೂಜಿಸುತ್ತಿದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ. ಜನರ ಅವರನ್ನ ಹೃದಯಲ್ಲಿ ಇಟ್ಟುಕೊಂಡು ಪೂಜಿಸ್ತಾ ಇದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
Advertisement
ಇಂದು ಅಂಬಿ ಎರಡನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ಎಲ್ಲರನ್ನೂ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಿದ್ದರು. ಎಲ್ಲರ ಪ್ರೀತಿ ಗಳಿಸಿ ಆ ಪ್ರೀತಿಯನ್ನ ಶಾಶ್ವತವಾಗಿ ಉಳಿಸಿಕೊಂಡಿದ್ದಾರೆ. ಇದಕ್ಕಿಂತ ಹೆಮ್ಮೆ ಯಾವುದೂ ಇಲ್ಲ ಎಂದರು.
Advertisement
Advertisement
ಮಂಡ್ಯದಲ್ಲಿ ನಿಜಕ್ಕೂ ಅಂಬಿ ಗುಡಿ ಕಟ್ಟಿರೋದು ಅದ್ಭುತ. ಆ ಊರಿನವರು ನನ್ನಿಂದ ಯಾವುದೇ ಸಹಾಯ ತಗೊಂಡಿಲ್ಲ. ನನಗೆ ಇದು ಸರ್ಪ್ರೈಸ್, ಜೊತೆಗೆ ಅಂಬಿ ಪ್ರೀತಿಗೆ ಕಂಚಿನ ಪುತ್ಥಳಿ ಸಂಕೇತ. ಅವರು ಬದುಕಿದ್ದಾಗ ಪ್ರತಿದಿನ ಜನರ ಮಧ್ಯೆ ಇರುತ್ತಿದ್ದರು ಎಂದು ತಿಳಿಸಿದರು.
Advertisement
ವಿಶೇಷವಾಗಿ ಮಂಡ್ಯ ಜನ ಅವರನ್ನ ದೇವರಂತೆ ಪೂಜಿಸ್ತಾ ಇದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರುವ ಆಸ್ತಿ. ಜನರ ಅವರನ್ನ ಹೃದಯಲ್ಲಿ ಇಟ್ಕೊಂಡು ಪೂಜಿಸ್ತಾ ಇದ್ದಾರೆ. ಅಂಬರೀಶ್ ಅವರಿಗೆ ಮನಸ್ಸಿನಲ್ಲೇ ಗುಡಿ ಕಟ್ಕೊಂಡಿದ್ದಾರೆ. ಸ್ಮಾರಕಕ್ಕೆ ಈಗಷ್ಟೇ ಟ್ರಸ್ಟ್ ರಿಜಿಸ್ಟಾರ್ ಆಗಿದೆ. ಇನ್ನಷ್ಟು ಮಿಟೀಂಗ್ ಮಾಡಿ ಯಾವ ರೀತಿ ಡಿಸೈನ್ ಮಾಡ್ಬೇಕು ಅನ್ನೋದನ್ನ ಚರ್ಚೆ ಮಾಡ್ತೀವಿ ಎಂದು ಹೇಳಿದರು.
ಇದೇ ವೇಳೆ ಸಚಿವ ಗೋಪಾಲಯ್ಯ ಮಾತನಾಡಿ, ಅಂಬರೀಶ್ ಬದುಕಿದ್ದಾಗ ಎಲ್ಲರಿಗೂ ಪ್ರೀತಿ-ಪಾತ್ರರಾಗಿದ್ದರು. ಎಲ್ಲರಿಗೂ ಸಹಾಯ ಮಾಡಿದ್ದ ಮೇರುನಟ, ನನ್ನ ಅವರ ನಡುವೆ ಬಾಂಧವ್ಯ ಚೆನ್ನಾಗಿತ್ತು. ಅಂಬಿ ಸಚಿವರಾಗಿದ್ದಾಗ ನಮ್ಮ ಕ್ಷೇತ್ರಕ್ಕೆ ಮಾಡಿರೋ ಸಹಾಯ ಮರೆಯುವಂತಿಲ್ಲ. ಸ್ಮಾರಕ ಕಟ್ಟೋ ಬಗ್ಗೆ ಮುಖ್ಯಮಂತ್ರಿ ಜೊತೆ ಮೀಟಿಂಗ್ ಆಗಿದೆ ಎಂದು ತಿಳಿಸಿದರು. ನಟ ದರ್ಶನ್ ಕೂಡ ಅಂಬಿ ಸ್ಮಾರಕಕ್ಕೆ ಆಗಮಿಸಿದ್ದಾರೆ.