ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಹಳ್ಳಿಗಳಿಗೂ ಕೊರೊನಾ ವ್ಯಾಪಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಇದೀಗ ಅಧಿಕಾರಿಗಳು ಗ್ರಾಮಗಳನ್ನು ಸೀಲ್ಡೌನ್ ಮಾಡಲು ಮುಂದಾಗಿದ್ದಾರೆ.
Advertisement
ಕೊರೊನಾ ಜಿಲ್ಲೆಯಲ್ಲಿ ವ್ಯಾಪಿಸಿರುವ ಪರಿಣಾಮ ಮಂಡ್ಯ ತಾಲೂಕಿನಲ್ಲಿ 8 ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ. ಹನಕೆರೆ, ಬಸರಾಳು, ಹುಲಿವಾನ, ಕೀಲಾರ, ಮಂಗಲ, ಹೆಮ್ಮಿಗೆ, ತೂಬಿನಕೆರೆ ಹಾಗೂ ಹಳುವಾಡಿ ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ. ಈ ಗ್ರಾಮಗಳಲ್ಲಿ ಪೈಕಿ ಒಂದೊಂದು ಗ್ರಾಮದಲ್ಲಿ 40ಕ್ಕೂ ಕೊರೊನಾ ಪಾಸಿಟಿವ್ ಕೇಸ್ಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಗ್ರಾಮಸ್ಥರು ಮಾತ್ರ ನಮ್ಮೂರುಗಳಲ್ಲಿ 150ಕ್ಕೂ ಹೆಚ್ಚು ಕೇಸ್ಗಳು ಇವೆ ಎಂದು ಹೇಳುತ್ತಿದ್ದಾರೆ.
Advertisement
Advertisement
ಕೆಆರ್ಪೇಟೆ ತಾಲೂಕಿನಲ್ಲಿ ಎರಡು ಗ್ರಾಮಗಳನ್ನು ಸೀಲ್ ಮಾಡಲಿದೆ. ಚೌಡಸಮುದ್ರ, ಕೊಮ್ಮೇನಹಳ್ಳಿ ಗ್ರಾಮಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊಮ್ಮೇನಹಳ್ಳಿ ಗ್ರಾಮದಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಉಳಿದ ತಾಲೂಕಿನ ಹಲವು ಗ್ರಾಮಗಳಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವುದರಿಂದ ಜನರಿಗೆ ಆತಂಕ ಸೃಷ್ಟಿಯಾಗಿದೆ.
Advertisement