Bengaluru CityCinemaDistrictsKarnatakaLatestMain Post

ಮಗನಿಗೆ ಜಾನಿ ಜಾನಿ ಎಸ್ ಪಪ್ಪಾ ಹೇಳಿಕೊಟ್ಟ ಯಶ್ – ವಿಡಿಯೋ ವೈರಲ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ. ಇದೀಗ ತಮ್ಮ ಪತಿ ಯಶ್ ಮತ್ತು ಮಗ ಯಥರ್ವ್ ಯಶ್‍ನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಲ್ಪೆಯ ಬ್ಲ್ಯಾಕ್ ರಾಕ್ ನಡುವೆ ರಾಕಿಂಗ್ ಸ್ಟಾರ್ ಯಶ್ ಖದರ್

ಲಾಕ್‍ಡೌನ್ ಸಮಯದಲ್ಲಿ ರಾಕಿಂಗ್ ದಂಪತಿ ಮನೆಯಲ್ಲಿ ತಮ್ಮ ಮಕ್ಕಳ ಜೊತೆ ಕಾಲಕಳೆದಿದ್ದಾರೆ. ಈ ವೇಳೆ ರೆಕಾರ್ಡ್ ಮಾಡಿಕೊಂಡಿದ್ದ ಎರಡು ವಿಡಿಯೋವನ್ನು ರಾಧಿಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಆ ವಿಡಿಯೋಗೆ ‘ಲಾಕ್‍ಡೌನ್ ಡೈರೀಸ್’ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.

ವಿಡಿಯೋದಲ್ಲಿ ಯಶ್ ತಮ್ಮ ಮಗನಿಗೆ ‘ಜಾನಿ ಜಾನಿ ಎಸ್ ಪಪ್ಪಾ’ ಹಾಡನ್ನು ಹೇಳಿಕೊಡುತ್ತಿದ್ದಾರೆ. ಕೊನೆಯಲ್ಲಿ ಅಪ್ಪನ ಹಾಡಿಗೆ ಯಥರ್ವ್ ಕೂಡ ಸಾಥ್ ಕೊಟ್ಟಿದ್ದಾನೆ. ಮತ್ತೊಂದು ವಿಡಿಯೋದಲ್ಲಿ ಇದೇ ಹಾಡನ್ನು ಯಶ್ ಮಗನಿಗೆ ಹೇಳಿಕೊಂಡಿದ್ದಾರೆ. ಈ ವೇಳೆ ಯಶ್ ಮಗಳು ಐರಾ ಕೂಡ ಹಾಡನ್ನು ಹೇಳಿರುವುದನ್ನು ನೋಡಹುದಾಗಿದೆ.

ರಾಧಿಕಾ ವಿಡಿಯೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಲಾಕ್‍ಡೌನ್ ಫ್ರೀ ಆದ ನಂತರ ಯಶ್ ‘ಕೆಜಿಎಫ್ 2’ ಸಿನಿಮಾದ ಚಿತ್ರೀಕರಣ ಉಡುಪಿಯ ಮಲ್ಪೆಯಲ್ಲಿ ನಡೆಯುತ್ತಿದೆ.

ಕಪ್ಪು ಬಣ್ಣದ 8-10 ಕಾರುಗಳು, ಅರಬ್ಬಿ ಸಮುದ್ರದ ತಟದಲ್ಲಿ ಐದಾರು ಬೋಟುಗಳು, ಬ್ರೌನ್ ಅಂಡ್ ವೈಟ್ ಡ್ರೆಸ್‍ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮಿಂಚಿದ್ದಾರೆ. ಕೊರೊನಾ ಲಾಕ್‍ಡೌನ್ ಮುಗಿಸಿದ ನಂತರ ಕೆಜಿಎಫ್ ಚಿತ್ರತಂಡ ಚಿತ್ರೀಕರಣ ಜೋರಾಗಿ ನಡೆಸುತ್ತಿದೆ. ಪ್ರಶಾಂತ್ ನೀಲ್ ಬೆಟಾಲಿಯನ್ ಉಡುಪಿ ಜಿಲ್ಲೆ ಮಲ್ಪೆ ಸಮೀಪದ ಪಡುಕೆರೆ ಕಡಲಕಿನಾರೆಯಲ್ಲಿ ಶೂಟಿಂಗ್ ನಡೆಯುತ್ತಿದೆ. ಚಿತ್ರದ ನಾಯಕ ಯಶ್ ಮತ್ತು ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

https://www.instagram.com/p/CGJxEFogdLc/?igshid=1p9wkbmb56nxa

ಉಡುಪಿಯಲ್ಲಿ ಕೆಜಿಎಫ್ ಚಿತ್ರ ತಂಡ ಮೂರು ದಿನ ಟೆಂಡ್ ಹಾಕಿದೆ. ಮಲ್ಪೆ ಬೀಚ್, ಮಲ್ಪೆ ಬಂದರು, ಪಡುಕೆರೆ ಬ್ರಿಜ್ ಆಸುಪಾಸಿನಲ್ಲಿ ಚಿತ್ರೀಕರಣ ನಡೆಸಲಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಜೋರಾಗಿರುವುದರಿಂದ ಮಲ್ಪೆ-ಪಡುಕೆರೆ ಕಡಲ ತೀರವನ್ನು ಮುಂಬೈ ಮಾದರಿಯಲ್ಲಿ ಚಿತ್ರೀಕರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Leave a Reply

Your email address will not be published.

Back to top button