ಮಂಗಳೂರು: ಆರು ವರ್ಷಗಳ ಕಾಲ ವಿಧಾನಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಅವರ ಸದಸ್ಯತ್ವದ ಅವಧಿ ಮುಕ್ತಾಯಗೊಂಡಿದ್ದು, ಇದೀಗ ವಕೀಲ ವೃತ್ತಿಯನ್ನು ಮತ್ತೆ ಆರಂಭಿಸಿದ್ದಾರೆ.
ಬಹಳ ಚುರುಕಿನ ವಿಧಾನಪರಿಷತ್ ಸದಸ್ಯರಾಗಿ ಐವನ್ ಡಿಸೋಜಾ ಗುರುತಿಸಿಕೊಂಡಿದ್ದರು. ಹೀಗಾಗಿ ಪರಿಷತ್ ಸದಸ್ಯರಾದ ಎರಡನೇ ವರ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸರ್ಕಾರಿ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Advertisement
Advertisement
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 6 ವರ್ಷದ ಅವಧಿಯಲ್ಲಿ ಅತೀ ಹೆಚ್ಚು ಅಂದ್ರೆ 1,600 ಜನರಿಗೆ 6.63 ಕೋಟಿ ರೂ. ಪರಿಹಾರ ನಿಧಿ ಕೊಡಿಸಿದ ಕೀರ್ತಿ ಐವನ್ ಅವರದ್ದು. ಸದ್ಯ ಮಂಗಳೂರಿನಲ್ಲಿ ವಕೀಲ ವೃತ್ತಿ ಮತ್ತೆ ಆರಂಭಿಸಿದ್ದು, ಇದರ ಜೊತೆಗೆ ಪಕ್ಷದ ಬಲವರ್ಧನೆ ತೊಡಗಿಸಿಕೊಳ್ಳಲಿದ್ದೇನೆ ಎಂದು ಐವನ್ ಡಿಸೋಜಾ ಹೇಳಿದ್ದಾರೆ.