ಬೆಂಗಳೂರು: ಇಂದು ಮಧ್ಯಾಹ್ನ ಚೆನ್ನಾಗಿದ್ದ ನಟ ಜಿರಂಜೀವಿ ಸರ್ಜಾ ಅವರು ಹೃದಯಾಘತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸ್ಯಾಂಡಲ್‍ವುಡ್‍ಗೆ ತುಂಬಲಾರದ ನಷ್ಟ ಉಂಟಾಗಿದೆ.
ಇಂದು ಸುಮಾರು 3.30ರ ವೇಳಗೆ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಹೃದಯಾಘತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ನಾಲ್ಕು ತಿಂಗಳ ಗರ್ಭಿಣಿ ಪತ್ನಿ ಮೇಘನಾ ರಾಜ್ ಅವರನ್ನು ಮತ್ತು ಸರ್ಜಾ ಕುಟುಂಬವನ್ನು ಅಗಲಿದ್ದಾರೆ. ಕೇವಲ 39ನೇ ವರ್ಷಕ್ಕೆ ಬಾರದ ಲೋಕಕ್ಕೆ ತೆರಳಿದ ಚಿರುವಿಗೆ ಚಂದನವದ ತಾರೆಯರು ಕಂಬನಿ ಮಿಡಿದಿದ್ದಾರೆ.
ಇಂದು ಹೇಗಿದ್ರು?
ಇಂದು ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿದೆ. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಾರೆ. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.
ಚಿರು ಅವರ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗವೇ ಶಾಕ್ ಆಗಿದೆ. ಜೊತೆಗೆ ನಟರಾದ ದರ್ಶನ್, ಪುನೀತ್ ರಾಜ್‍ಕುಮಾರ್, ಗಣೇಶ್, ನಟಿ ಅಮೂಲ್ಯ ಮುಂತಾದ ಕಲಾವಿದರ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನೂ ನಟಿ ತರಾ, ಸೃಜನ್ ಲೊಕೇಶ್, ಕಿಚ್ಚ ಸುದೀಪ್ ಅವರು ಆಸ್ಪತ್ರೆಗೆ ಬಂದು ಚಿರುವಿನ ಅಂತಿಮ ದರ್ಶನ ಪಡೆದಿದ್ದಾರೆ. ಚಿರು ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.