ಅಡುಗೆಗೆ ಬಳಸುವ ತರಕಾರಿಯಲ್ಲಿ ಕೆಲವೊಂದು ಮಾತ್ರ ಆಯ್ಕೆ ಮಾಡಿಕೊಂಡು ತಿನ್ನುವುದು ಹೆಚ್ಚು. ಆದರೆ ನಾವು ಬೇಡ ಎಂದು ದೂರ ತಳ್ಳುವ ಮೂಲಂಗಿಯಿಂದ ನಮ್ಮ ಆರೋಗ್ಯಕ್ಕೆ ಹಲವು ಉತ್ತಮ ಪೋಷಕಾಂಶಗಳು ಸಿಗುತ್ತವೆ. ಮೂಲಂಗಿಯನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ಆರೋಗ್ಯಕ್ಕೆ ಸಿಗುವ ಅಂಶಗಳನ್ನು ಕೇಳಿದರೆ ಖಂಡಿತವಾಗಿಯೂ ಮೂಲಂಗಿಯನ್ನು ತಿನ್ನಲು ಪ್ರಾರಂಭಿಸುತ್ತಿರಿ.
Advertisement
* ಪ್ರತಿದಿನ ಬೆಳಗ್ಗೆ ಮೂಲಂಗಿಯನ್ನು ತಿನ್ನುವುದರಿಂದ ಕಾಮಾಲೆ ಅಲ್ಲದೆ ಮಧುಮೇಹ ರೋಗವನ್ನು ಸಹ ದೂರ ಮಾಡಬಹುದು
* ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಮೂಲಂಗಿಯನ್ನು ಸೇವನೆ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದಾಗಿದೆ.
* ಮೂಲಂಗಿ ರಸದೊಂದಿಗೆ ಶುಂಠಿ ರಸವನ್ನು ಬೆರಸಿ ಕುಡಿಯುವುದರಿಂದ ಹಸಿವು ಹೆಚ್ಚುವುದಲ್ಲದೆ, ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳನ್ನು ದೂರ ಮಾಡುತ್ತದೆ.
Advertisement
Advertisement
* ಒಂದು ಚಮಚ ಜೇನು ತುಪ್ಪಕ್ಕೆ, ಒಂದು ಚಮಚ ಮೂಲಂಗಿ ರಸ ಸೇರಿಸಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ.
* ಮೂಲಂಗಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
* ಜಾಂಡೀಸ್ ಅಥವಾ ಕಾಮಾಲೆ ರೋಗಕ್ಕೆ ಮೂಲಂಗಿ ರಾಮಬಾಣದಂತೆ ಕೆಲಸ ಮಾಡುತ್ತದೆ.
* ಮೂಲಂಗಿ ಮತ್ತು ಉಪ್ಪು ಸೇರಿಸಿ ನುಣ್ಣಗೆ ಅರಿದು ಚೇಳು ಕಚ್ಚಿದ ಸ್ಥಳಕ್ಕೆ ಹಚ್ಚಿದರೆ ಚೇಳಿನ ವಿಷ ಏರುವುದಿಲ್ಲ
Advertisement
ಮೂಲಂಗಿಯಿಂದ ಆರೋಗ್ಯಕ್ಕೆ ಬೇಕಾಗುವ ಉತ್ತಮ ಪ್ರಮಾಣದ ಫೈಬರ್ ಸಿಗುತ್ತದೆ. ಮೂಲಂಗಿಯನ್ನು ಬೇಡ ಎಂದು ದೂರ ತಳ್ಳುವ ಬದಲಾಗಿ ಇನ್ನಾದರೂ ಪ್ರತಿನಿತ್ಯದ ಆಹಾರದಲ್ಲಿ ಕೊಂಚ ಪ್ರಮಾಣದಲ್ಲಾದರೂ ಸೇರಿಸಿಕೊಳ್ಳಿ.