ರಾಯಚೂರು: ಕೋವಿಡ್ 19 ಅಟ್ಟಹಾಸದಿಂದ ಜನಜೀವನವೇ ಬದಲಾಗಿದೆ. ಶಾಲಾ ಕಾಲೇಜುಗಳು ಯಾವಾಗ ಆರಂಭವಾಗುತ್ತವೆ ಅನ್ನೋ ಸ್ಪಷ್ಟತೆ ಇನ್ನೂ ಮೂಡಿಲ್ಲ. ಹೀಗಾಗಿ ಮಕ್ಕಳ ಅಕ್ಷರಭ್ಯಾಸ ತಪ್ಪಬಾರದು ಅಂತ ಶಾಲೆಗೆ ಬೀಗ ಹಾಕಿದ್ರೂ ರಾಯಚೂರಿನ ಲಿಂಗಸುಗೂರಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತೆರಳಿ ಪಾಠ ಮಾಡುತ್ತಿದ್ದಾರೆ.
Advertisement
ತಾಲೂಕಿನ ಪುಟ್ಟಹಳ್ಳಿ ಕೆಸರಟ್ಟಿ ಗ್ರಾಮದ ಮುಖ್ಯೋಪಾಧ್ಯಾಯ ಚಂದ್ರಶೇಖರಪ್ಪ ಹಾಗೂ ಸಹ ಶಿಕ್ಷಕರು ಮಧ್ಯಾಹ್ನದವರೆಗೆ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಹೇಳುತ್ತಿದ್ದಾರೆ. ಹೋಂ ವರ್ಕ್ ಕೊಟ್ಟು ಮರುದಿನ ಬಂದು ಪರಿಶೀಲಿಸುತ್ತಿದ್ದಾರೆ. ಪಾಠದ ಜೊತೆಗೆ ಮಕ್ಕಳು ಹಾಗೂ ಪೋಷಕರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
Advertisement
ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪಾಠ ಮಾಡುತ್ತಾರೆ. ಮಕ್ಕಳಿಗೆ ನೀಡಿದ ಹೋಂ ವರ್ಕ್‍ನ್ನ ಮಾಡಿಸುವಂತೆ ಪೋಷಕರಿಗೆ ಸೂಚನೆ ನೀಡುತ್ತಿದ್ದಾರೆ. ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ, ಗ್ರಾಮದ ಸ್ವಚ್ಛತೆ ಬಗ್ಗೆಯೂ ಅರಿವು ಮೂಡಿಸುತ್ತಿದ್ದಾರೆ. ಶಿಕ್ಷಕರ ನಡೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.