– ರಾಯಬಾಗದ ಕುಡಚಿ- ಉಗಾರ ಸೇತುವೆ ಸಹ ಜಲಾವೃತ
ಬಾಗಲಕೋಟೆ/ಬೆಳಗಾವಿ: ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವ ಹಿನ್ನೆಲೆ ನದಿ ತೀರ 34 ಹಳ್ಳಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯ ನೀರಿನ ಮಟ್ಟ 4 ಅಡಿಗಳಷ್ಟುಇ ಹೆಚ್ಚಾಗಿದ್ದು, ರಾಜ್ಯ ಹೆದ್ದಾರಿಯ ಕುಡಚಿ-ಉಗಾರ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಭಾರೀ ಮಲೆ ಸುರಿಯುತ್ತಿರುವ ಹಿನ್ನೆಲೆ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದೆ. ಹೀಗಾಗಿ ನದಿ ಪಾತ್ರದ ಜನತೆ ತೀವ್ರ ಆತಂಕಗೊಂಡಿದ್ದಾರೆ.
Advertisement
ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ ತೀರದ 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಪಕ್ಕದ ಹಳೆಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ 4-5 ಅಡಿಯಷ್ಟು ನೀರು ಹರಿದು ಬರುತ್ತಿದ್ದು, ಗೋವನಕೊಪ್ಪ-ಕೊಣ್ಣೂರ ಮಾರ್ಗದ ರಸ್ತೆ ಸಂಪರ್ಕ ಕಡಿತವಾಗಿದೆ.
Advertisement
Advertisement
ನೀರಿನ ಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗಿದ್ದು, ನದಿ ಪಕ್ಕದ ಪೇರಲ ಬೆಳೆ ಹಾಗೂ ಇತರೆ ಬೆಳೆಗಳಿರುವ ಜಮೀನುಗಳು ನೀರಿನಿಂದ ಜಲಾವೃತವಾಗಿವೆ. ಸ್ಥಳಕ್ಕೆ ಬಾದಾಮಿ ತಹಶೀಲ್ದಾರ್ ಸುಹಾಸ್ ಇಂಗಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಅಲ್ಲದೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದರಿಂದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ 4 ಅಡಿಗಳಷ್ಟು ಹೆಚ್ಚಳವಾಗಿದೆ. ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ- ಉಗಾರ ಮದ್ಯದ ಸೇತುವೆ ಜಲಾವೃತವಾಗಿದ್ದು, ಕಳೆದ ಒಂದು ವಾರದ ಹಿಂದೆ ನೀರು ಕಡಿಮೆಯಾಗಿ ಸಂಚಾರಕ್ಕೆ ಮುಕ್ತವಾತ್ತು. ಇದೀಗ ಕೃಷ್ಣಾ ನದಿಗೆ ನೀರು ಹೆಚ್ಚು ಹರಿದುಬರುತ್ತಿರುವುದರಿಂದ ಮತ್ತೆ ಜಲಾವೃತಗೊಂಡಿದೆ. ಇದು ಜಮಖಂಡಿ-ಮೀರಜ್ ನ ಮುಖ್ಯ ಅಂತರರಾಜ್ಯ ಹೆದ್ದಾರಿಯಾಗಿದೆ.