Connect with us

Chamarajanagar

ಮಲೆ ಮಹದೇಶ್ವರ ಪೊಲೀಸ್ ಠಾಣೆ ಪೇದೆಗೆ ಕೊರೊನಾ

Published

on

ಚಾಮರಾಜನಗರ: ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಗಡಿ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿದೆ.

ಈಗಾಗಲೇ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಲ್ಕು ದಿನದಿಂದ ಪೊಲೀಸ್ ಪೇದೆ ರಜೆಯಲ್ಲಿದ್ದರು. ಇಂದು ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪೊಲೀಸ್ ಕಾನ್ಸ್‍ಟೇಬಲ್ ಸಂಪರ್ಕದಲ್ಲಿದ್ದ 7 ಮಂದಿಯನ್ನು ಹೋಮ್ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಪೇದೆ ಮೂಲತಃ ಮೈಸೂರು ಜಿಲ್ಲೆಯ ಮೂಗೂರು ಗ್ರಾಮದವರಾಗಿದ್ದಾರೆ. ಪೆದೆಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.

ಕಂಟೈನ್ಮೆಂಟ್ ಝೋನ್ ನಿವಾಸಿಗಳ ಪ್ರತಿಭಟನೆ
ಆಹಾರ, ಹಾಲು ಸೇರಿದಂತೆ ಅಗತ್ಯ ವಸ್ತುಗಳು ಪೂರೈಕೆಯಾಗದ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪದ ಬಾಗಳಿ ಗ್ರಾಮದಲ್ಲಿ ಕಂಟೈನ್ಮೆಂಟ್ ಝೋನ್‍ನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳ ಪೂರೈಕೆ ಮಾಡಲು ಜಿಲ್ಲಾಡಳಿತ ಗ್ರಾ.ಪಂ. ಸಿಬ್ಬಂದಿಯನ್ನು ನೇಮಕ ಮಾಡಿದೆ. ಆದರೆ ನಮಗೆ ಊಟದ ಸಮಸ್ಯೆಯಾಗಿದೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *