ನವದೆಹಲಿ: ಜೂನ್ 19ರಂದು ನಡೆಯಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಸಾಕಷ್ಟು ಪೈಪೋಟಿ ಶುರುವಾಗಿತ್ತು. ಕಾಂಗ್ರೆಸ್ ನಾಯಕರಾದ ಬಿ.ಕೆ ಹರಿಪ್ರಸಾದ್ ಮತ್ತು ರಾಜೀವ್ ಗೌಡ ಅವರಿಂದ ಎರಡು ಸ್ಥಾನಗಳು ತೆರವಾಗಿತ್ತು. ಈ ಬಾರಿ ಸಂಖ್ಯೆಗಳ ಕೊರತೆಯಿಂದ ಒಂದು ಸ್ಥಾನವನ್ನು ಮಾತ್ರ ಸುಲಭವಾಗಿ ಗೆಲ್ಲಬಹುದಾಗಿದೆ.
Advertisement
Advertisement
ಈ ಒಂದು ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಮತ್ತು ರಾಜೀವ್ಗೌಡ ಮರು ಆಯ್ಕೆ ಬಯಸಿದ್ದರು. ಲೋಕಸಭಾ ಟಿಕೆಟ್ ವಂಚಿತ ಮಾಜಿ ಸಂಸದ ಮುದ್ದಹನುಮೇಗೌಡರು ಕೂಡಾ ಟಿಕೆಟ್ಗಾಗಿ ಪ್ರಯತ್ನ ಮಾಡಿದ್ದರು.
Advertisement
ಲೋಕಸಭೆ ಚುನಾವಣೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಆಯ್ಕೆಯಾಗುವ ಇಂಗಿತವನ್ನು ಹೈಕಮಾಂಡ್ ಮುಂದೆ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಅವರು ನಿರಂತರ ಪ್ರಯತ್ನ ಕೂಡ ಮಾಡುತ್ತಿದ್ದರು. ರಾಜ್ಯಸಭೆಯಲ್ಲಿ ಬಿಜೆಪಿ ವಿರುದ್ಧ ಗಟ್ಟಿ ಧ್ವನಿಯ ಅವಶ್ಯಕತೆ ಹಿನ್ನೆಲೆ ಎಐಸಿಸಿ ರಾಜ್ಯದ ವರದಿಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ಗೆಲುವು ಬಹುತೇಕ ಖಚಿತವಾಗಿದೆ.
Advertisement
ಬಿಜೆಪಿಗೆ ಎರಡು ಸ್ಥಾನ ದೊರೆಯಲಿದ್ದು ಬಾಕಿ ಉಳಿದ ಮತ್ತೊಂದು ಸ್ಥಾನಕ್ಕೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಜೆಡಿಎಲ್ಪಿ ಸಭೆ ನಡೆದಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುನ್ನು ಕಂಡಿದ್ದ ಹೆಚ್ಡಿಡಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಪ್ರತಿಪಕ್ಷ ಸ್ಥಾನ ಪಡೆಯಲು ಬೇಕಾದಷ್ಟು ಸ್ಥಾನವನ್ನು ಕಾಂಗ್ರೆಸ್ ಗೆದ್ದುಕೊಂಡಿರಲಿಲ್ಲ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.