– 25ಕ್ಕೂ ಹೆಚ್ಚು ಜನ ಸೇಫ್
ಚಿಕ್ಕಮಗಳೂರು: ಭಾರೀ ಮಳೆ ಮಧ್ಯೆ ದಟ್ಟವಾದ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಜಾರಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾರ್ಮಾಡಿ ಘಾಟಿ ದಾಟಿ ಕೊಟ್ಟಿಗೆಹಾರ ಸಮೀಪದ ದರ್ಬಾರ್ ಹೋಟೆಲ್ ಬಳಿ ಬರುವಾಗ ಎದುರಿನಿಂದ ಬಂದ ವಾಹನಕ್ಕೆ ಸೈಡ್ ಕೊಡಲು ಹೋಗಿ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾರಿಗೂ ಯಾವ ತೊಂದರೆಯೂ ಆಗಿಲ್ಲ.
Advertisement
Advertisement
ಬಸ್ ನಿಯಮಿತ ವೇಗದಲ್ಲಿದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಬಸ್ ವೇಗವಾಗಿ ಚಲಿಸುತ್ತಿದ್ದರೆ ದೊಡ್ಡ ಅನಾಹುತ ಸಂಭವಿಸಿತ್ತಿತ್ತು ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಅಷ್ಟೆ ಅಲ್ಲದೆ ಬಸ್ ನಿಯಂತ್ರಿಸಿದ ಚಾಲಕನ ಬಗ್ಗೆಯೂ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ ಹೊಂಡಕ್ಕೆ ಜಾರುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಬಳಿಕ ಹಿಂದಿನಿಂದ ಬಂದ ಮತ್ತೊಂದು ಬಸ್ಸಿನಲ್ಲಿ ಪ್ರಯಾಣಿಕರನ್ನು ಕಳುಹಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.