ಮುಂಬೈ: ಬ್ರಿಟನ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಅನ್ನು 2021 ರ ಜನವರಿ 31ರವರೆಗೆ ವಿಸ್ತರಣೆ ಮಾಡಿದೆ.
ಹೌದು. ಮಹಾಮಾರಿ ಕೊರೊನಾ ವೈರಸ್ ದೇಶದ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ಮಧ್ಯೆ ಇದೀಗ ಬ್ರಿಟನ್ ವೈರಸ್ ಕೂಡ ದೇಶಕ್ಕೆ ವಕ್ಕರಿಸಿಕೊಂಡಿದೆ. ಬ್ರಿಟನ್ ನಿಂದ ಬಂದವರು ತಮ್ಮ ಮೊಬೈಲ್ ಗಳನ್ನು ಸ್ವಿಚ್ಛ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಇದೀಗ ಅವರ ಪತ್ತೆಗೆ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಬ್ರಿಟನ್ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಜಾರಿಗೊಳಿಸಿದೆ.
Advertisement
Advertisement
ಯುಕೆಯಿಂದ ಬಂದಂತಹ 15 ಮಂದಿಯಲ್ಲಿ ಬ್ರಿಟನ್ ವೈರಸ್ ಪತ್ತೆಯಾಗಿದೆ. ಇನ್ನೂ ಕೆಲವರು ನಾಪತ್ತೆಯಾಗಿದ್ದು, ಇವರೆಲ್ಲರ ಪತ್ತೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
Advertisement
ಕೆಲ ದಿನಗಳ ಹಿಂದೆ ಸರ್ಕಾರ ಮುಂದಿನ 6 ತಿಂಗಳ ಕಾಲ ಮಾಸ್ಕ್ ಕಡ್ಡಾಯ, ಆದರೆ ಲಾಕ್ ಡೌನ್ ಮಾಡುವ ಘೋಷಣೆ ಇಲ್ಲ ಎಂದು ಅಧಿಕೃತವಾಗಿ ಘೋಷಿಸಿತ್ತು. ಕೊರೊನಾ ನಿಯಂತ್ರಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿಕೊಂಡಿದ್ದರು.
Advertisement
Maharashtra Government extends lockdown restrictions in the state till 31st January 2021, to prevent the spread of COVID19 pic.twitter.com/mAJOhHDQkY
— ANI (@ANI) December 30, 2020