ಬೆಂಗಳೂರು: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಸೋಂಕು ಬಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ.
Advertisement
Advertisement
ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.
Advertisement
ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.