ಬೆಂಗಳೂರು: ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಜಿ.ಟಿ.ದೇವೇಗೌಡರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಂಡಿದ್ದಾರೆ.
Advertisement
ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ.
— GT Devegowda (@GTDevegowda) August 5, 2020
Advertisement
ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯರಿಗೂ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾರಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.