ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿದೆ.
Advertisement
ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.
— Dr Yathindra Siddaramaiah (@Dr_Yathindra_S) August 4, 2020
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
Advertisement
Advertisement
ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.
ಕೊರೊನಾ ಬಂದಿರುವ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.
ಆಸ್ಪತ್ರೆಗೆ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್ ವಾರ್ಡ್ನಲ್ಲಿದ್ದು ಆರೋಗ್ಯವಾಗಿದ್ದಾರೆ.