ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿರುವ ನಡುವೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ.
ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನುವ ಎಚ್ಚರಿಕೆ ನೀಡಿದ್ದ ತಜ್ಞರ ಅಭಿಪ್ರಾಯ ನಿಜವಾಗ್ತಿದ್ಯಾ ಅನ್ನೋ ಅನುಮಾನ ಕಾಡತೊಡಗಿದೆ. ಕಳೆದ 10 ದಿನಗಳ ವರದಿಯಲ್ಲಿ 499 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
Advertisement
Advertisement
ಕಳೆದ 5 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 19 ವರ್ಷದೊಳಗಿನ 262 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಬಿಬಿಎಂಪಿಯನ್ನು ಚಿಂತೆಗೀಡುಮಾಡಿದೆ. ಇದನ್ನೂ ಓದಿ: ಡೆವಿಲ್ ಈಸ್ ಬ್ಯಾಕ್, ಶಸ್ತ್ರ ಚಿಕಿತ್ಸೆ ಯಶಸ್ವಿ: ಪ್ರಕಾಶ್ ರಾಜ್
Advertisement
ಕಳೆದ ಹತ್ತು ದಿನಗಳಲ್ಲಿ ನಗರದಲ್ಲಿ 499 ಮಕ್ಕಳು ಕೊರೊನಾ ಬಾಧಿತರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನವಜಾತ ಶಿಶುಗಳಿಂದ 9 ವರ್ಷವರೆಗಿನ 194 ಮಕ್ಕಳು ಹಾಗೂ 10 ವರ್ಷದಿಂದ 19 ವರ್ಷದೊಳಗಿನ 305 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.