ಹೈದರಾಬಾದ್: ಕೋವಿಡ್-19 ಪ್ರಕರಣಗಳ ಸಂಖ್ಯೆಯನ್ನು ತಡೆಗಟ್ಟಲು ಮೇ 5 ರಿಂದ ಎರಡು ವಾರಗಳವರೆಗೂ ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಧಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಮಧ್ಯಾಹ್ನ 12 ರಿಂದ 6 ರವರೆಗೆ ಲಾಕ್ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತದೆ.
Advertisement
144 ಸೆಕ್ಷನ್ ಸಿಆರ್ಪಿಸಿ ಅಡಿಯಲ್ಲಿ ಜಾರಿಯಿರಲಿದ್ದು, ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 12 ಗಂಟೆಯ ಬಳಿಕ ಕರ್ಫ್ಯೂ ಪ್ರಾರಂಭವಾಗುತ್ತದೆ ಮತ್ತು ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
Advertisement
ಕೋವಿಡ್-19 ಇರುವುದರಿಂದ ಕಳೆದ ಕೆಲವು ದಿನಗಳಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಆದರೆ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೊರೊನಾವನ್ನು ಹೊಗಲಾಡಿಸಲು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಿರ್ಧರಿಸಿದ್ದಾರೆ.