– ಪ್ರಧಾನಿ ಮೋದಿ ಜೊತೆ ವೀಡಿಯೋ ಸಂವಾದ
– ಬೆಂಗಳೂರಿನಲ್ಲಿ ಮೂರು ಕೇರ್ ಸೆಂಟರ್
ಬೆಂಗಳೂರು: ಕೆಲ ದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯದಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಹಾಗೂ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
Advertisement
ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿಯವರು ವೀಡಿಯೋ ಕಾನ್ಫರೆನ್ಸ್ ನಡೆಸಿದ್ದು, ಜನರಲ್ಲಿ ಭಯ ಸೃಷ್ಟಿಸುವ ಅಗತ್ಯವಿಲ್ಲ. ಲಸಿಕೆ ತಯಾರಿಕೆಗೆ ಎಲ್ಲ ಅವಕಾಶಗಳ ಬಳಕೆಗೆ ರಾಜ್ಯಗಳು ಸಹಕಾರ ಕೊಡುವಂತೆ ಕೇಳಿಕೊಂಡರು. ಅಲ್ಲದೆ ಕೊರೊನಾ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ತಿಳಿಸಿದರು ಎಂದರು.
Advertisement
ಟೆಸ್ಟ್, ಟ್ರ್ಯಾಕ್, ಟ್ರೀಟ್ ಈ ಮೂರು ಟಿಗಳ ಬಗ್ಗೆ ಪ್ರಧಾನಿಗಳು ಒತ್ತಿ ಹೇಳಿದ್ದು, ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದರು. ಹೀಗಾಗಿ ಮಾಸ್ಕ್ ಧರಸುವುದನ್ನು ಕಡ್ಡಾಯಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಅಗತ್ಯವಿದ್ದರೆ ಮೈಕ್ರೋ ಕಂಟೈನ್ಮೆಂಟ್ ಝೋನ್‍ಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ಸಿಎಂ ವಿವರಿಸಿದರು.
Advertisement
ಕೋವಿಡ್-19 ಸ್ಥಿತಿಗತಿಯ ಕುರಿತು ಚರ್ಚಿಸಲು ಪ್ರಧಾನಮಂತ್ರಿ @narendramodi ರವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ @BSYBJP ರವರು ಪಾಲ್ಗೊಂಡರು.
ಆರೋಗ್ಯ ಸಚಿವ @mla_sudhakar, ಗೃಹ ಸಚಿವ @BSBommai, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು pic.twitter.com/wgfeORImKH
— CM of Karnataka (@CMofKarnataka) March 17, 2021
Advertisement
ಕಳೆದ ಹತ್ತು ದಿನಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಿಸುವ ಅಗತ್ಯವಿದೆ. ಹೆಚ್ಚು ಜನ ಸೇರುವ ಕಡೆ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ತಡೆಯಲು ಕ್ರಮ ವಹಿಸಲು ಪ್ರಧಾನಿ ಸೂಚಿಸಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಜನ ಸೇರುವ ಕಾರ್ಯಕ್ರಮಗಳಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯ. ಬಹಿರಂಗ ಕಾರ್ಯಕ್ರಮಗಳಿಗೆ ಜನಮಿತಿ ಹೊರತುಪಡಿಸಿ, ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.
ಬೆಂಗ್ಳೂರಲ್ಲಿ 3 ಕೇರ್ ಸೆಂಟರ್
ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರಿಸಲಾಗಿದೆ. ಅಪಾರ್ಟ್‍ಮೆಂಟ್ ಸೇರಿ ಕೆಲ ನಿರ್ಧಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕಿಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದೇವೆ. ಮೂರನೇ ಹಂತದ ಪಟ್ಟಣಗಳಲ್ಲಿ ಸಹ ಟೆಸ್ಟಿಂಗ್ ಹೆಚ್ಚಳಕ್ಕೆ ಪ್ರಧಾನಿ ಸೂಚನೆ ನೀಡಿದ್ದಾರೆ. ಮೈಕ್ರೋ ಕಂಟೈನ್ಮೆಂಟ್ ನಿರ್ಮಿಸುವಂತೆ ತಿಳಿಸಿದ್ದಾರೆ.
ಸಿಎಂಗೆ ಪ್ರಧಾನಿ ಮೋದಿ ಸಲಹೆ
ರಾಜ್ಯದಲ್ಲಿ ಲಸಿಕೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದು, ನಿತ್ಯ 3 ಲಕ್ಷ ಜನಕ್ಕೆ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದೆ. ಮಾಸ್ಕ್ ದಂಡದಲ್ಲಿ ಯಾವುದೇ ರೀತಿಯ ಹೆಚ್ಚಳ ಇಲ್ಲ. ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೇರೆ ರಾಜ್ಯಗಳಿಂದ ಬರುವವರಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಕೊರೊನಾ ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಪ್ರಧಾನಿ ಮೋದಿ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿಳಿಸಿದರು.
ಎಲ್ಲ ರಾಜ್ಯಗಳಿಗೂ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಒದಗಿಸಲಾಗಿದ್ದು, ಕೊರತೆಯಾಗದಂತೆ ಎಚ್ಚರ ವಹಿಸಲಾಗುವುದು. ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದೇ ಹೊರತು ವಾತಾವರಣದಲ್ಲಿನ ವೈರಸ್ ನಿರ್ನಾಮ ಆಗುವುದಿಲ್ಲ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಬೆಂಗಳೂರು ನಗರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್- 19 ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.
ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದ್ದು, ಈ ಕುರಿತು ಸಹ ಕ್ರಮ ವಹಿಸಲಾಗುತ್ತಿದೆ. ಎರಡು ಮತ್ತು 3ನೇ ಹಂತದ ನಗರಗಳು ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಹಳ್ಳಿಗಳಿಗೆ ಹಬ್ಬದಂತೆ ಎಚ್ಚರ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಅಂಬುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಸೂಚಿಸಿದರು. ಲಸಿಕೆ ವ್ಯರ್ಥವಾಗುವ ಪ್ರಮಾಣ ಕಡಿಮೆಗೊಳಿಸುವಂತೆ ಪ್ರಧಾನಿ ಮೋದಿ ರಾಜ್ಯಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಕೋವಿನ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡ ರಾಜ್ಯದ 2,042 ಆಸ್ಪತ್ರೆಗಳಲ್ಲಿ 1,439 ಆಸ್ಪತ್ರೆಗಳು ಇನ್ನೂ ಲಸಿಕೆ ಅಭಿಯಾನ ಪ್ರಾರಂಭಿಸಿಲ್ಲ. ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದಲ್ಲದೆ ಚಿಕಿತ್ಸಾ ನಿರ್ವಹಣೆಯ ಮಾರ್ಗಸೂಚಿಗಳ ಪಾಲನೆ, ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, (ಟೆಸ್ಟ್, ಟ್ರ್ಯಾಕ್, ಟ್ರೀಟ್) ಮಾದರಿಯನ್ನು ತೀವ್ರಗೊಳಿಸುವಂತೆ ತಿಳಿಸಿದರು. ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸುವಂತೆ ಸೂಚನೆ ನೀಡಲಾಯಿತು.
ರಾಜ್ಯದಲ್ಲಿ ಈ ವರೆಗೆ 9.61 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 12 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2020ರ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಕೋವಿಡ್ 19 ಸೋಂಕು ತೀವ್ರಗೊಂಡಿತ್ತು. ನವೆಂಬರ್ ನಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗತೊಡಗಿತು. ಡಿಸೆಂಬರ್ ನಲ್ಲಿ ಇನ್ನೂ ಹೆಚ್ಚಿನ ಇಳಿಕೆಯಾಯಿತು. ಆದರೆ ಕಳೆದ 10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿಯಲ್ಲಿವೆ. ಪಾಸಿಟಿವಿಟಿ ರೇಟ್ ಮಾರ್ಚ್ 15ರಂದು ಶೇ.1.65ರಷ್ಟು ವರದಿಯಾಗಿದೆ.
ಪ್ರಕರಣಗಳ ಸಂಖ್ಯೆಯು ಬೆಂಗಳೂರು, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ. ಮಾರ್ಚ್ 15ರಂದು ತಜ್ಞರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕ್ರಮ ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಜಾಗೃತಿ ಅಭಿಯಾನ, ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು.
ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ ಹಾಸಿಗೆಗಳು, ಐಸಿಯುಗಳನ್ನು ಮೀಸಲಿಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿರುವ 3,500ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು. ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ನೀತಿಯಂತೆ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಬೇಕಾಗಿದೆ. ವೃದ್ಧಾಶ್ರಮಗಳಲ್ಲಿ, ಅಪಾರ್ಟ್ ಮೆಂಟ್ ಗಳಲ್ಲಿ ಹಾಗೂ ದುರ್ಗಮ ಪ್ರದೇಶಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲು ಅನುಮತಿ ಕೋರಲಾಯಿತು. ಇಂತಹ ಸ್ಥಳಗಳಲ್ಲಿ ಲಸಿಕೆ ಕೇಂದ್ರದಲ್ಲಿ ಒದಗಿಸುವ ಎಲ್ಲ ಸೌಲಭ್ಯಗಳು, ಅಂಬುಲೆನ್ಸ್ ಹಾಗೂ ಸಾಕಷ್ಟು ಸಂಖ್ಯೆಯ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಪ್ರಧಾನಿ ಗಮನಕ್ಕೆ ತರಲಾಗಿದೆ ಎಂದು ಸಿಎಂ ತಿಳಿಸಿದರು.