ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಮೈಸೂರು ದಸರಾ ಆಚರಣೆ ಮತ್ತು ಮುಂಜಾಗ್ರತ ಕ್ರಮರಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಆಯುಕ್ತ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಉಪಸ್ಥಿತರಿದ್ದರು.
Advertisement
Advertisement
ದಿನಕ್ಕೊಂದು ಕಾರ್ಯಕ್ರಮ: ಅಕ್ಟೋಬರ್ 17ರಂದು ಬೆಳಗ್ಗೆ 7:45 ರಿಂದ 8:15 ರೊಳಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಕೊರೊನಾ ವಾರಿಯರ್ಸ್ ಗಳ ಆಯ್ಕೆಯನ್ನು ಆಯಾ ಇಲಾಖೆಯ ಮುಖ್ಯಸ್ಥರಿಗೆ ವಹಿಸಲಾಗಿದೆ. ಅರಮನೆಯಂಗಳದಲ್ಲಿ 9 ದಿನಗಳ ಕಾರ್ಯಕ್ರಮ ಇರಲಿದೆ. 9 ದಿನಗಳ ಕಾಲ ರಾಷ್ಟ್ರೀಯ, ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಆದರೆ ಈ ಬಾರಿ ಒಂದು ದಿನಕ್ಕೆ ಒಂದೇ ಕಾರ್ಯಕ್ರಮ ಇರಲಿದೆ.
Advertisement
https://twitter.com/CMofKarnataka/status/1315176548912132097
Advertisement
ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್ಗೆ ಗೌರವ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಡಾ.ಮಂಜುನಾಥ್ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ.
ಕೊರೋನಾ ಪರಿಸ್ಥಿತಿ ನಡುವೆಯೇ ಮುಂಬರುವ ಹಬ್ಬದ ದಿನಗಳಲ್ಲಿ ನಾವು ಮತ್ತಷ್ಟು ಜಾಗ್ರತೆ ವಹಿಸುವುದು ಅತ್ಯಗತ್ಯ. ವಿಶೇಷವಾಗಿ ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಕೋವಿಡ್ ಹರಡದಂತೆ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವರು, ಮುಖ್ಯಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. pic.twitter.com/wTj1hahvYm
— B.S.Yediyurappa (@BSYBJP) October 11, 2020