ನಿರ್ದೇಶಕ ವಿಜಯಾನಂದ್ ನಿರ್ದೇಶನದಲ್ಲಿ ಅಜಯ್ ರಾವ್ ನಟಿಸಿರುವ ‘ಕೃಷ್ಣ ಟಾಕೀಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವಿಜಯಾನಂದ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿರುವ ವಿಜಯಾನಂದ್ ಸುಮಾರು ಅರವತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಹಾಗೂ ನಲವತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಹಿತ್ಯ ಬರೆದಿದ್ದಾರೆ. ಓಳ್ ಮುನ್ಸಾಮಿ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದ ಇವರು ಎರಡನೇ ಸಿನಿಮಾ ‘ಕೃಷ್ಣ ಟಾಕೀಸ್’ನಲ್ಲಿ ಅಜಯ್ ರಾವ್ ಅವರಿಗೆ ಆಕ್ಷನ್ ಕಟ್ ಹೇಳಿದ್ದಾರೆ.
Advertisement
ನೈಜ ಘಟನೆಯಿಂದ ಸ್ಪೂರ್ತಿ ಪಡೆದ ಈ ಚಿತ್ರ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್ ಸಬ್ಜೆಕ್ಟ್ ಒಳಗೊಂಡಿದೆ. ‘ಕೃಷ್ಣನ್ ಲವ್ಸ್ಟೋರಿ, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ, ‘ಕೃಷ್ಣ ಲೀಲಾ, ‘ಕೃಷ್ಣ ರುಕ್ಕು ಹೀಗೆ ಕೃಷ್ಣ ಹೆಸರಿನ ಸರಣಿ ಸಿನಿಮಾಗಳಲ್ಲಿ ನಟಿಸಿದ್ದ ಅಜೇಯ್ ರಾವ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಬಗ್ಗೆ ನಟ ಅಜಯ್ ರಾವ್ ಮಾತನಾಡಿದ್ದು ಮೊದಲ ಬಾರಿಗೆ ಈ ಸಿನಿಮಾದಲ್ಲಿ ಜರ್ನಲಿಸ್ಟ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇದು ನನ್ನ ಸಿನಿ ಕೆರಿಯರ್ ನ 26ನೇ ಸಿನಿಮಾ. ಹಾರಾರ್ ಥ್ರಿಲ್ಲರ್ ಸಬ್ಜೆಕ್ಟ್ ಸಿನಿಮಾ ಹಿಂದೆಂದೂ ಮಾಡಿರಲಿಲ್ಲ. ಸಿನಿಮಾ ಮತ್ತು ನನ್ನ ಪಾತ್ರ ಎರಡೂ ಪೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ.
Advertisement
Advertisement
ಅಜಯ್ ಜೋಡಿಯಾಗಿ ಅಪೂರ್ವ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ. ನಟಿ ಸಿಂಧು ಲೋಕನಾಥ್ ಕೂಡ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಅಭಿಷೇಕ್ ಜಿ. ಕಾಸರಗೋಡು ಕ್ಯಾಮೆರಾ ನಿರ್ದೇಶನದಲ್ಲಿ ಸಿನಿಮಾ ಸೆರೆಯಾಗಿದೆ. ವಿಕ್ರಂ ಅವರ ಸಾಹಸ ನಿರ್ದೇಶನವಿದಲ್ಲಿ ಸಾಹಸ ದೃಶ್ಯಗಳು ಮೂಡಿ ಬಂದಿವೆ. ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು, ಶೋಭರಾಜ್, ಮಂಡ್ಯ ರಮೇಶ್, ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಶಾಂಭವಿ, ಲಕ್ಷ್ಮಿಗೌಡ, ಯಮುನಾ, ಧರ್ಮೇಂದ್ರ ಅರಸ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಗೋಕುಲ್ ಎಂಟಟೈನರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಗೋವಿಂದರಾಜು ಎ.ಹೆಚ್ ಆಲೂರು ಬಂಡವಾಳ ಹಾಕಿದ್ದಾರೆ. ಏಪ್ರಿಲ್ 16ರಂದು ‘ಕೃಷ್ಣ ಟಾಕೀಸ್’ ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.
Advertisement