ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗುತ್ತಿದೆ. ಆದರೆ ಇತ್ತ ಭೂಮಿ ಪೂಜೆ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
यह सूचना मैंने अयोध्या में रामजन्मभूमिन्यास के वरिष्ठ अधिकारी और @PMOIndia को भेज दी है की माननीय @narendramodi के शिलान्यास कार्यक्रम के समय उपस्थित समूह के सूची में से मेरा नाम अलग कर दे ।
— Uma Bharti (@umasribharti) August 3, 2020
Advertisement
ಹೌದು. ಕೊರೊನಾ ವೈರಸ್ ಭೀತಿಯಿಂದ ಉಮಾ ಭಾರತಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ. ಈ ಬಗ್ಗೆ ಈಗಾಗಲೇ ಅತಿಥಿಗಳ ಪಟ್ಟಿಯಿಂದ ತನ್ನ ಹೆಸರು ಹೊರಗಿಡುವಂತೆ ಕಾರ್ಯಕ್ರಮದ ಹಿರಿಯ ಅಧಿಕಾರಿಗಳಿಗೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೂ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಶುಭಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳುತ್ತಿದ್ದು, ಅವರ ಆರೋಗ್ಯದ ಬಗ್ಗೆ ನನಗೆ ಆತಂಕ ಶುರುವಾಗಿದೆ ಎಂದಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!
Advertisement
मै भोपाल से आज रवाना होऊंगी । कल शाम अयोध्या पहुँचने तक मेरी किसी संक्रमित व्यक्ति से मुलाकात हो सकती हैं ऐसी स्थिति में जहाँ @narendramodi और सेकडो लोग उपस्थित हो मै उस स्थान से दूरी रखूँगी । तथा @narendramodi और सभी समूह के चले जाने के बाद ही मै रामलला के दर्शन करने पहुँचूँगी।
— Uma Bharti (@umasribharti) August 3, 2020
Advertisement
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಉಮಾ ಭಾರತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಸುದ್ದಿ ಕೇಳಿದ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆತಂಕ ಎದುರಾಗಿದೆ. ಅಮಿತ್ ಶಾ ಹಾಗೂ ಬಿಜೆಪಿ ನಾಯಕರಿಗೆ ಕೊರೊನಾ ಪಾಸಿಟಿವ್ ಎಂದು ಸುದ್ದಿ ಕೇಳಿದ ಬಳಿಕ ಭಯ ಶುರುವಾಗಿದೆ. ಅಯೋಧ್ಯೆ ಭೂಮಿ ಪೂಜೆಯಲ್ಲಿ ಭಾಗಿಯಾಗುವವರ ಅದರಲ್ಲೂ ಮೋದಿ ಬಗ್ಗೆ ನನಗೆ ಆತಂಕ ಹೆಚ್ಚಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ
Advertisement
ಇಂದು ನಾನು ಭೋಪಾಲ್ ನಿಂದ ಹೊರಟು ನಾಳೆ ಸಂಜೆ ಅಯೋಧ್ಯೆ ಸೇರುತ್ತೇನೆ. ಆದರೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ. ಯಾಕಂದರೆ ಒಂದು ವೇಳೆ ನಾನು ಈ ಶುಭಕಾರ್ಯದಲ್ಲಿ ಪಾಲ್ಗೊಂಡರೆ ನನಗೂ ಸೋಂಕು ಹರಡಬಹುದು. ಪ್ರಧಾನಿ ಮೋದಿಯವರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯಬಾರದು. ಈ ಹಿನ್ನೆಲೆಯಲ್ಲಿ ನಾನು ಮನೆಯಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸುತ್ತೇನೆ. ಕಾರ್ಯಕ್ರಮ ಮುಗಿಸಿ ಪ್ರಧಾನಿಯವರು ದೆಹಲಿಗೆ ಹೊರಟ ನಂತರ ನಾನು ಅಯೋಧ್ಯೆಗೆ ಹೋಗುತ್ತೇನೆ. ಅಲ್ಲಿಯವರೆಗೆ ಸರಯೂ ನದಿಯ ತಟದಲ್ಲಿ ವಿಹರಿಸುವುದಾಗಿ ಉಮಾ ಭಾರತಿ ಮಾಹಿತಿ ನೀಡಿದ್ದಾರೆ.
कल जब से मैंने श्री @AmitShah जी तथा @BJP4UP के नेताओं के बारे में कोरोना पोज़िटिव होने का सुना तभी से मै अयोध्या में मंदिर के शिलान्यास में उपस्थित लोगों के लिये ख़ासकर @narendramodi जी के लिये चिंतित हूँ ।
— Uma Bharti (@umasribharti) August 3, 2020