Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

Bengaluru City

ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

Public TV
Last updated: May 24, 2021 3:06 pm
Public TV
Share
2 Min Read
Dr C N Ashwathnarayan
SHARE

ಬೆಂಗಳೂರು: ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್‍ಗಳ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ ಸಹಿತ 50 ಬೆಡ್‍ಗಳ ಆರೈಕೆ ಕೇಂದ್ರಕ್ಕೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು.

Dr C N Ashwathnarayan 3

‘ವಿಶ್ವವಾಣಿ’ ಫೌಂಡೇಶನ್ ಹಾಗೂ ‘ಅಜೀಂ ಪ್ರೇಮ್ ಜಿ’ ಫೌಂಡೇಶನ್ ಸಹಯೋಗದಲ್ಲಿ ಈ ಕೋವಿಡ್ ಐಸಿಯು ವೆಂಟಿಲೇಟರ್ ವಾರ್ಡ್ ಸ್ಥಾಪನೆಯಾಗಿದ್ದು, ಈ ಭಾಗದ ಸೋಂಕಿತರಿಗೆ ಹೆಚ್ಚು ಅನುಕೂಲವಾಗಲಿದೆ.

ಯಲಹಂಕದ ಸರ್ಕಾರಿ ಪ್ರಿ-ಮೆಟ್ರಿಕ್‌ ಬಾಲಕಿಯರ ವಸತಿ ಶಾಲೆಯಲ್ಲಿ ನಿರ್ಮಿಸಿರುವ 50 ಹಾಸಿಗೆ ಸಾಮರ್ಥ್ಯದ Oxycare ಕೇಂದ್ರವನ್ನು ಉದ್ಘಾಟಿಸಲಾಯಿತು.

ವೈದ್ಯಕೀಯ ಸಿಬ್ಬಂದಿಗಳು ಮತ್ತು ಮುಂಚೂಣಿ ಕಾರ್ಯಕರ್ತರ ಸೇವೆ ಶ್ಲಾಘನೀಯ. ನಗರದ ಅನೇಕ ವಾರ್ಡ್ ಗಳಲ್ಲಿ, ತಾಲೂಕು ಕೇಂದ್ರಗಳಲ್ಲೂ #OxygenatedBeds ಹೆಚ್ಚಳಕ್ಕೆ ಆದ್ಯತೆ ನೀಡುತ್ತಿದ್ದೇವೆ. pic.twitter.com/hDtehIbIc6

— Dr. Ashwathnarayan C. N. (@drashwathcn) May 24, 2021

ಉದ್ಘಾಟನೆ ನಂತರ ಮಾತನಾಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ, ಟೆಕ್ನಾಲಜಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಖಾಸಗಿಯವರ ಸಹಯೋಗದಲ್ಲಿ ಉತ್ತಮ ಆರೋಗ್ಯ ಮೂಲಸೌಕರ್ಯ ಒದಗಿಸುವ ಕೆಲಸ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಗುತ್ತಿದೆ. ಈ ನಿಟ್ಟಿನಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪ್ರಯತ್ನ ಶ್ಲಾಘನೀಯ ಎಂದರು.

Dr C N Ashwathnarayan2

ರಾಜ್ಯದ ಉದ್ದಗಲಕ್ಕೂ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರಕಾರ ಸರ್ವ ರೀತಿಯ ಕ್ರಮ ವಹಿಸಿದೆ. ಕಾಲಮಿತಿಯೊಳಗೆ ಈ ಕೆಲಸ ಮಾಡಿ ಮುಗಿಸಲಾಗುವುದು. ಸರಕಾರಿ & ಖಾಸಗಿ ಸಹಯೋಗದಲ್ಲಿ ಈ ಮಹತ್ಕಾರ್ಯವನ್ನು ಸಾಧಿಸಲಾಗುವುದು ಎಂದ ಅವರು, ಕೋವಿಡ್‍ನಂಥ ಸಾಂಕ್ರಾಮಿಕ ಮಾರಿಯನ್ನು ಎದುರಿಸಬೇಕಾದರೆ ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ವೈದ್ಯ ವ್ಯವಸ್ಥೆ ಇರಲೇಬೇಕು ಎಂದರು.

#COVID19 ಸೋಂಕಿತರ ಆರೈಕೆಗಾಗಿ ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್‌ ಸಾಮರ್ಥ್ಯದ ICU ಹಾಸಿಗೆ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.

ಕ್ಷೇತ್ರದ ಶಾಸಕರಾದ @SRVishwanathBJP ಅವರ ಮುತುವರ್ಜಿಯಲ್ಲಿ ಉತ್ತಮ ಆರೋಗ್ಯ ಸೇವೆ ನಡೆಯುತ್ತಿದೆ. ಸರ್ಕಾರದಿಂದ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. pic.twitter.com/JoL3lyh2st

— Dr. Ashwathnarayan C. N. (@drashwathcn) May 24, 2021

ಯಲಹಂಕದಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮಾತನಾಡಿ, ಕ್ಷೇತ್ರದಲ್ಲಿ ಯಾರೊಬ್ಬರೂ ಆರೋಗ್ಯ ಸೇವೆಯಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ರೀತಿಯ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ. ಕ್ಷೇತ್ರದಲ್ಲಿ ಜನಸಾಮಾನ್ಯರಿಗೂ ವೆಂಟೆಲೇಟರ್ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದರ ಉಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

Dr C N Ashwathnarayan8

ಆಸ್ಪತ್ರೆಯಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಡರ್ಸ್ ಫಾರ್ ಯೂ ಸಂಸ್ಥೆಯ ಸಿಬ್ಬಂದಿ ರೋಗಿಗಳ ಆರೈಕೆಯಲ್ಲಿ ತೊಡಗಿದ್ದಾರೆ. ಕೋವಿಡ್ ಕೇರ್ ಕೇಂದ್ರದಲ್ಲಿ ಸೋಂಕಿತರಿಗೆ ರಿಕ್ರಿಯೇಷನ್ ಗೂ ಅವಕಾಶ ಇದ್ದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಕ್ರಿಕೆಟ್ ಆಡುವುದರ ಮೂಲಕ ಅದಕ್ಕೂ ಚಾಲನೆ ನೀಡಿದರು. ಕ್ರಿಕೆಟ್, ವಾಲಿಬಾಲ್, ಕೇರಂ ಇತ್ಯಾದಿ ಆಟಗಳಿಗೂ ಯಲಹಂಕ ದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿಶ್ವನಾಥ ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಆಸ್ಪತ್ರೆ ಮುಖ್ಯಸ್ಥೆ ಡಾ.ಅಸ್ಮಾ, ಡಿಎಚ್‍ಒ ಡಾ.ಶ್ರೀನಿವಾಸ್, ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಟರ್ ಫಾರ್ ಯೂ ಸಂಸ್ಥೆಯ ಪ್ರತಿನಿಧಿಗಳು ಇದ್ದರು.

TAGGED:bengaluruDr C N AshwathnarayanYelahankaಆಮ್ಲಜನಕ ಬೆಡ್ಆಸ್ಪತ್ರೆಕೊರೊನಾಡಾ.ಸಿ.ಎನ್ ಅಶ್ವತ್ಥನಾರಾಯಣಪಬ್ಲಿಕ್ ಟಿವಿಬೆಂಗಳೂರುಯಲಹಂಕವೆಂಟಿಲೇಟರ್ ಬೆಡ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
12 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
15 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
21 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
23 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
35 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?