ಕಾರವಾರ: ಶಾಸಕರ ಅನುದಾನದಲ್ಲಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಅಂಬುಲೆನ್ಸ್ ಖರೀದಿಸಿದ್ದಾರೆ.
ಖರೀದಿಸಿದ ಅಂಬುಲೆನ್ಸ್ ಗಟ್ಟಿಮುಟ್ಟಾಗಿದೆಯೇ ಎಂದು ಪರೀಕ್ಷಿಸಲು ತಾವೇ ಸ್ವತ: ಹೊಸದಾಗಿ ಬಂದ ಅಂಬುಲೆನ್ಸ್ ಏರಿ ವಾಹನ ಚಲಾಯಿಸಿ ಟ್ರಯಲ್ ನೋಡಿದರು. ಯಲ್ಲಾಪುರದ ಪ್ರವಾಸಿ ಮಂದಿರದಿಂದ ಯಲ್ಲಾಪುರ ನಗರವನ್ನು ಒಂದು ಸುತ್ತುಹಾಕಿ ನಂತರ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.
Advertisement
ಇಂದು ಮುಂಡಗೋಡ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ ಸಾಂಕೇತಿಕವಾಗಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. pic.twitter.com/lvAxYWdEEn
— Shivaram Hebbar (@ShivaramHebbar) May 29, 2021
Advertisement
ಸಚಿವ ಶಿವರಾಮ್ ಹೆಬ್ಬಾರ್ ರವರು ತಮ್ಮ ವೃತ್ತಿಯನ್ನು ಮೊದಲು ಲಾರಿ ಚಾಲಕರಾಗಿ ಆರಂಭಿಸಿದ್ದರು. ನಂತರ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲವು ರಾಜಕೀಯ ಕಾರಣಕ್ಕೆ ಕಾಂಗ್ರೆಸ್ ಗೆ ಬರುವ ಮೂಲಕ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಮತ್ತೆ ಪುನ: ಬಿಜೆಪಿಗೆ ಬರುವ ಮೂಲಕ ಇಂದು ರಾಜ್ಯ ಕಾರ್ಮಿಕ ಸಚಿವರಾಗಿದ್ದಾರೆ. ಇದನ್ನೂ ಓದಿ : ಉತ್ತರ ಕನ್ನಡ ಜಿಲ್ಲೆಯ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ
Advertisement
ಇಂದು ಯಲ್ಲಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಲಾಯಿತು.
ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಯ ಸ್ಥತಿಗತಿಗಳ pic.twitter.com/ZjrbgABmJY
— Shivaram Hebbar (@ShivaramHebbar) May 29, 2021