ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ.
ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ.
Advertisement
ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 ಮಂದಿ ವಿಚಾರಣೆ ನಡೆಸಲಾಗಿದೆ. ಇದ್ರಲ್ಲಿ ನಾನು ಒಬ್ಬ ಅಷ್ಟೇ ಎಂದಿದ್ದಾರೆ. ವಿಚಾರಣೆಗೆ ಮತ್ತೆ ಕರೆದರೆ ಬರುತ್ತೇನೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ.
Advertisement
ಈಗಾಗಲೇ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಆರು ಆರೋಪಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಹೆಚ್ಚಿನ ವಿಚಾರಣೆಗಾಗಿ ಶೀಘ್ರವೇ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಸಹ ಸಿಬಿಐ ನೋಟಿಸ್ ಕೊಡುವ ಸಾಧ್ಯತೆ ಇದೆ.
Advertisement
ಸಿಬಿಐ ತನಿಖೆ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಸಚಿವ ಶೆಟ್ಟರ್, ತಪ್ಪು ಮಾಡಿಲ್ಲ ಅಂದ್ರೆ ಸಿಬಿಐ ತನಿಖೆಗೆ ಹೆದರೋದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.