ಲಕ್ನೋ: ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಯುಪಿಎಸ್ಆರ್ಟಿಸಿ) ಮಹಿಳೆಯರಿಗೆ ಎಲ್ಲ ಮಾದರಿಯ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ.
Advertisement
ಎಲ್ಲ ಮಾದರಿಯ ಬಸ್ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದು, ಆಗಸ್ಟ್ 2ರ ಮಧ್ಯರಾತ್ರಿಯಿಂದ ಆಗಸ್ಟ್ 3ರ ವರೆಗೆ ಮಹಿಳೆಯರು ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.
Advertisement
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ರಕ್ಷಾ ಬಂಧನದ ಹಿನ್ನೆಲೆ ರಾಖಿ ಹಾಗೂ ಸಿಹಿ ತಿನಿಸು ಮಾರುವ ವ್ಯಾಪಾರಿಗಳಿಗೆ ಭಾನುವಾರ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಪೊಲೀಸರು ಕಟ್ಟುನಿಟ್ಟಾಗಿ ಗಸ್ತು ತಿರುಗಬೇಕು ಎಂದು ಆದೇಶಿಸಲಾಗಿದೆ. ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
Advertisement
Advertisement
ಆಗಸ್ಟ್ 3ರಂದು ಸೋಮವಾರ ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದ್ದು, ಮಹಿಳೆಯರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಕೊರೊನಾ ಲೆಕ್ಕಿಸದೆ ರಾಖಿ ಹಾಗೂ ಸಿಹಿ ಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ.