– ಪೋಷಕರ ಭೇಟಿಗೆ ಒಪ್ಪದ ಸಂತ್ರಸ್ತೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಆರೋಪದ ಕೇಸ್ ಅನ್ನು ಸಿಬಿಐಗೆ ಒಪ್ಪಿಸಬೇಕೆಂಬ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಜೂನ್ 18ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಎಸ್ಐಟಿ ತಂಡ, ಸಿಡಿ ಪ್ರಕರಣ, ಯುವತಿ ಪೋಷಕರು ದಾಖಲಿಸಿದ್ದ ಕಿಡ್ನಾಪ್ ಕೇಸ್, ಹೈಕೋರ್ಟ್ ಸಿಜೆಗೆ ಯುವತಿ ಪತ್ರ ಬರೆದಿದ್ದ ಬಗ್ಗೆ ಸೇರಿದಂತೆ 3 ತನಿಖಾ ವರದಿಗಳನ್ನು ಸಲ್ಲಿಸಿತು.
Advertisement
ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆಯಲ್ಲಿರುವ ಕಾರಣ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ವರದಿ ಸಲ್ಲಿಸಿದ್ದರು. ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ಸಲ್ಲಿಸಿದ್ರು. ಈ ಬಗ್ಗೆ ಸಿಜೆ ಓಕಾ ಪ್ರತಿಕ್ರಿಯಿಸಿ, ಎಸ್ಐಟಿ ಮುಖ್ಯಸ್ಥರ ಸಹಿ ಇಲ್ಲದೆ ವರದಿ ಸಲ್ಲಿಸುವ ಅಗತ್ಯವೇನಿತ್ತು? ಎಸ್ಐಟಿ ಮುಖ್ಯಸ್ಥರು ದೃಢೀಕರಿಸಿ ಸಹಿ ಮಾಡಿದ ಬಳಿಕವೇ ವರದಿ ಸಲ್ಲಿಸಬೇಕು. ಜೂನ್ 17ಕ್ಕೆ ಮತ್ತೆ ವರದಿ ಸಲ್ಲಿಸಿ ಅಂತ ಸೂಚಿಸಿದರು.
Advertisement
Advertisement
ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಜಾರಕಿಹೊಳಿ ಪರ ವಕೀಲ ಸಿ.ವಿ.ನಾಗೇಶ್ ಆಕ್ಷೇಪಣೆ ಸಲ್ಲಿಸಿದ್ರು. 3ನೇ ವ್ಯಕ್ತಿಗಳು ತನಿಖೆಯನ್ನು ನಿರ್ಧರಿಸಬಾರದು ಎಂದು ವಾದಿಸಿದ್ರು. ಇದಕ್ಕೆ ಸಿಜೆ ಓಕಾ ಅವರು, ನಿಮಗೆ ನ್ಯಾಯಸಮ್ಮತ ತನಿಖೆ ಇಷ್ಟವಿಲ್ಲವೇ. ನೀವು ಆಕ್ಷೇಪ ಎತ್ತಿದರೆ ನಾವು ಹಾಗೆ ಭಾವಿಸಬೇಕಾಗುತ್ತದೆ ಎಂದು ಹೇಳಿದ್ರು. ಇನ್ನು, ಆರೋಪಿಗಳಾದ ನರೇಶ್, ಶ್ರವಣ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಯ್ತು. ಈ ಮಧ್ಯೆ ಸದ್ಯಕ್ಕೆ ನಾನು ಪೋಷಕರನ್ನು ಭೇಟಿಯಾಗಲ್ಲ. ಎಲ್ಲವೂ ಸರಿ ಹೋದ ಮೇಲೆ ಮಾತನಾಡ್ತೇನೆ ಅಂತ ಸಂತ್ರಸ್ತೆ ಹೇಳಿದ್ದಾರೆ. ಧಾರವಾಡ ಪೀಠದಲ್ಲಿ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಯುವತಿ ಹೇಳಿಕೆ ನೀಡಿದ್ದಾರೆ.
Advertisement
ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇದನ್ನೂ ಓದಿ: ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ
ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?
ಕಳೆದ 6 ದಿನಗಳ ಹಿಂದೆಯಷ್ಟೇ ಎಸ್ಐಟಿ ಮುಂದೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ಯುವತಿ ಸಮ್ಮತಿಯ ಮೇರೆಗೆ ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದು, ಬಳಿಕ ಆಕೆಯೇ ವಿಡಿಯೋ ಮಾಡಿಕೊಂಡು ಈ ರೀತಿ ನಡೆದುಕೊಳ್ಳುತ್ತಾ ಇದ್ದಾಳೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಈ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಅಲ್ಲಗೆಳೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಯಾವುದೇ ಬೆಳವಣಿಗೆಯೂ ನಡೆದಿಲ್ಲ. ತನಿಖೆಯ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಅಂತ ಈ ಸುದ್ದಿಗೆ ಎಸ್ಐಟಿ ಮೂಲಗಳು ಸ್ಪಷ್ಟಪಡಿಸಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿತ್ತು. ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ