ಮೈಸೂರು: ರಾಜ್ಯದಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಕೃತಕವಾಗಿ ಅಭಾವ ಸೃಷ್ಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಮೈಸೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿದವರ ಮೇಲೆ ಮೈಸೂರಿನಲ್ಲಿ ಈಗಾಗಲೇ ನಾಲ್ಕು ಕೇಸ್ ದಾಖಲಾಗಿದೆ. ಹಲವರು ಅಕ್ರಮವಾಗಿ ಗೋದಾಮಿನಲ್ಲಿ ಇಟ್ಟು ಅಭಾವ ಸೃಷ್ಟಿಸಿದ್ದಾರೆ. ಇದರಿಂದ ರೈತರು ಕ್ಯೂನಲ್ಲಿ ನಿಲ್ಲುವ ಸಮಸ್ಯೆ ಉಂಟಾಗುತ್ತಿದೆ ಎಂದರು. ಇದನ್ನೂ ಓದಿ: ಕಾನೂನು ರಕ್ಷಣೆ ರದ್ದು – ಟ್ವಿಟ್ಟರ್ ವಿರುದ್ಧ ಬಿತ್ತು ಮೊದಲ ಕೇಸ್
Advertisement
Advertisement
ರೈತರಿಗೆ ಬಿತ್ತನೆ ಬೀಜಗಳು ಸೂಕ್ತ ಬೆಲೆಯಲ್ಲಿ ನಿಗದಿತ ಸಮಯಕ್ಕೆ ಸಿಗಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೃತಕವಾಗಿ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಹಾಗೂ ಸಾಧ್ಯವಾದರೆ ಅಂತಹ ಅಂಗಡಿಗಳನ್ನು ಜಪ್ತಿ ಮಾಡಿ ಎಂದರು.
Advertisement
ಮೈಸೂರು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಬಿತ್ತನೆ ಬೀಜಕ್ಕೆ 39798 ಕ್ವಿಂಟಾಲ್ ಬೇಡಿಕೆ ಇದ್ದು, 45275 ಕ್ವಿಂಟಾಲ್ ಲಭ್ಯತೆ ಇದೆ. ರಸಗೊಬ್ಬರ 44,209 ಮೆಟ್ರಿಕ್ ಟನ್ ದಾಸ್ತಾನು ಇತ್ತು. ಈಗಾಗಲೇ 26,459 ಮೆಟ್ರಿಕ್ ಟನ್ ಮಾರಾಟ ಮಾಡಲಾಗಿದೆ. ಇನ್ನೂ 17,749 ಮೆಟ್ರಿಕ್ ಟನ್ ದಾಸ್ತಾನು ಉಳಿದಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಶಾಸಕರಾದ ಕೆ.ಮಹದೇವ್, ಹರ್ಷವರ್ಧನ್, ಅನೀಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.