ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.
ಸೋಮವಾರ ನ್ಯಾಯಾಲಯ ನಟಿ ರಾಗಿಣಿ ದ್ವಿವೇದಿಯನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇಂದು ಜಾಮೀನು ಕೋರಿ ರಾಗಿಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಪರ ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಾಮೀನು ಅರ್ಜಿಯ ವಿಚಾರಣೆಯನ್ನ ಸೆ.19ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
Advertisement
Advertisement
ಸೋಮವಾರ ರಾತ್ರಿ ಪರಪ್ಪನ ಅಗ್ರಹಾರ ಸೇರಿರುವ ರಾಗಿಣಿಯನ್ನ ಕಾಣಲು ಪೋಷಕರು ಜೈಲಿನ ಬಳಿ ಆಗಮಿಸಿದ್ದರು. ಆದ್ರೆ ಅವಕಾಶ ಸಿಗದ ಹಿನ್ನೆಲೆ ವಾಪಾಸ್ಸಾದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಗಿಣಿ ತಾಯಿ ರೋಹಿಣಿ ದ್ವಿವೇದಿ, ನನ್ನ ಮಗಳು ಹತ್ತು ವರ್ಷಗಳಿಂದ ಕನ್ನಡ ಇಂಡಸ್ಟ್ರಿಯಲ್ಲಿ ದುಡಿದಿದ್ದಾಳೆ. ನಮ್ಮ ಬಳಿ ಇರುವುದು ಒಂದೇ ಫ್ಲ್ಯಾಟ್. ಮಾಧ್ಯಮಗಳಲ್ಲಿ ಮೂರು ಮೂರು ಫ್ಲ್ಯಾಟ್ ಗಳಿವೆ ಎಂದು ಬಿಂಬಿಸಲಾಗುತ್ತಿದೆ. ನಾವು ಇಡಿ ಗೆ ಈಗಾಗಲೆ ಮಾಹಿತಿ ನೀಡಿದ್ದೇವೆ. ಆಕೆ ಹೆಣ್ಣು ಸಿಂಹ ಇದ್ದ ಹಾಗೆ. ನಾವು ಯಾವುದಕ್ಕು ಹೆದರುವುದಿಲ್ಲ ಎಂದು ಹೇಳಿದ್ದರು.
Advertisement
Advertisement
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಸಂಜನಾರನ್ನ ಇಂದು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇತ್ತ ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಚಂದನವನದ ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.