ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ಹೌದು. ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿಯರಿಗೆ ಇದೀಗ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಗಳ ಭಯ ಶುರುವಾಗಿದೆ. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಇಡಿ ಅಧಿಕಾರಿಗಳು ಆಗಮಿಸಿ, ಸಂದೀಪ್ ಪಾಟೀಲ್ ರನ್ನು ಭೇಟಿ ಮಾಡಿದ್ದಾರೆ. ಡ್ರಗ್ಸ್ ಡೀಲ್ ನಲ್ಲಿ ಸಾಕಷ್ಟು ಅಕ್ರಮ ಹಣ ಹರಿದಾಡಿದೆ. ಈ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿಕೊಂಡಿದ್ದರು.
Advertisement
Advertisement
ಒಟ್ಟಿನಲ್ಲಿ ಸಿಸಿಬಿಯಿಂದ ಬಚಾವಾದ್ರೆ ಸಾಕು ಅಂತಿದ್ದ ನಟಿಯರಿಗೆ ಇದೀಗ ಇಡಿ ಸಖತ್ ಶಾಕ್ ಕೊಡಲಿದೆ. ಪಾರ್ಟಿಗಳಿಗೆ ಹರಿದು ಬರ್ತಿದ್ದ ಹಣದ ಮೂಲವನ್ನು ಇಡಿ ಕೆದಕಲಿದೆ. ಡ್ರಗ್ಸ್ ಡೀಲ್ ನಿಂದ ಯಾರ್ಯಾರು ಎಷ್ಟೆಷ್ಟು ಹಣ ಮಾಡಿದ್ದಾರೆ. ಪಾರ್ಟಿಗಳಿಗೆ ಹಣ ಎಲ್ಲಿಂದ ಬರ್ತಿತ್ತು. ಇದಕ್ಕೆಲ್ಲಾ ಲೆಕ್ಕ ಎಲ್ಲಿದೆ?. ಡ್ರಗ್ಸ್ ನಿಂದ ಅಕ್ರಮವಾಗಿ ವಿದೇಶಕ್ಕೆ ಎಷ್ಟು ಹಣ ಹರಿದಿದೆ. ಈ ಎಲ್ಲಾ ವಿಚಾರವಾಗಿ ಇಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.
Advertisement
Advertisement
ಸದ್ಯ ವಿರೇನ್ ಖನ್ನಾನನ್ನು ಸಿಸಿಬಿ ಅಧಿಕಾರಿಗಳು ಇಡಿ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದು, ಇದೀಗ ಅಧಿಕಾರಿಗಳು ವೀರೇನ್ ಖನ್ನಾನನ್ನು ವಿಚಾರಣೆ ಮಾಡಲು ಕರೆದೊಯ್ದಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇತ್ತ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.