ಬೆಂಗಳೂರು: ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು. ಅಂದರೆ ಶೇ.10ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.
Advertisement
Advertisement
ತಾವು ರಾಜೀನಾಮೆ ಕೊಡುವ ಮುನ್ನವೇ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲು ಸಿಎಂ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ಇಂದು ಆದೇಶಿಸಲಾಗಿದೆ. ವಾರದ ಹಿಂದೆ ತುಟ್ಟಿಭತ್ಯೆ ಪರಿಷ್ಕರಣೆಗೆ ಸಿಎಂ ಯಡಿಯೂರಪ್ಪ ಸಹಿ ಹಾಕಿದ್ದರು. ತಮ್ಮ ಭಾಷಣದಲ್ಲೂ ಸರ್ಕಾರಿ ನೌಕರರ ಬಗ್ಗೆ ಮಾತನಾಡಿ, ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ತುಟ್ಟಿ ಭತ್ಯೆ ಹೆಚ್ಚಳ ಆದೇಶ ಹೊರಬಿದ್ದಿದೆ.