– ಇಂದು ಕೊರೊನಾಗೆ 103 ಜನ ಬಲಿ
ಬೆಂಗಳೂರು: ರಾಜ್ಯದಲ್ಲಿ ಇಂದು 6,706 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ.
Advertisement
ಇಂದು 6,706 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ. ಇದರಲ್ಲಿ 78,337 ಸಕ್ರಿಯ ಪ್ರಕರಣಗಳಿದ್ದು, ಇಂದು ಸಹ 103 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈ ವರೆಗೆ ಒಟ್ಟು 3,613 ಜನ ಸಾವನ್ನಪ್ಪಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಇಂದು 8,609 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಒಟ್ಟು 1,21,242 ಜನ ಗುಣಮುಖರಾಗಿದ್ದಾರೆ. ಚೇತರಕೆ ಪ್ರಮಾಣ ಶೇ.59.67 ಆಗಿದೆ. ಇಂದು 55,999 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವರೆಗೆ ಒಟ್ಟು 18,82,316 ಜನರನ್ನು ಪರೀಕ್ಷೆ ಮಾಡಲಾಗಿದೆ.
Advertisement
ಸಿಲಿಕಾನ್ ಸಿಟಿಯಲ್ಲಿ 1,893 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 33,150 ಸಕ್ರಿಯ ಪ್ರಕರಣಗಳಿವೆ. ಇಂದು 22 ಜನ ಕೊರೊನಾಗೆ ಬಲಿಯಾಗಿದ್ದಾರೆ. 2,210 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದಲ್ಲಿ ಚೇತರಿಕೆ ಪ್ರಮಾಣ ಶೇ.57.80ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 1,893, ಮೈಸೂರು 522, ಬಳ್ಳಾರಿ 445, ಉಡುಪಿ 402, ದಾವಣಗೆರೆ 328, ಬೆಳಗಾವಿ 288, ಕಲಬುರಗಿ 285, ಧಾರವಾಡ 257, ದಕ್ಷಿಣ ಕನ್ನಡ 246, ರಾಯಚೂರು 181 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಮೃತಪಟ್ಟವರ ಪೈಕಿ ಬೆಂಗಳೂರಿನಲ್ಲಿ 22, ಮೈಸೂರು 12, ಬಳ್ಳಾರಿ 9, ಕಲಬುರಗಿ 9, ಬೆಳಗಾವಿ 6, ಧಾರವಾಡ 6, ದಕ್ಷಿಣ ಕನ್ನಡ 6, ಕೊಪ್ಪಳದಲ್ಲಿ 5 ಜನ ಕೊರೊನಾಗೆ ಬಲಿಯಾಗಿದ್ದಾರೆ.