ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಾವಿನ ಸರಣಿ ಮುಂದುವರಿದಿದ್ದು, ಇಂದು 6 ಮಂದಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 170ಕ್ಕೇರಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಮಾಹಿತಿಯ ಅನ್ವಯ ಬೆಂಗಳೂರು ಗ್ರಾಮಾಂತರದಲ್ಲಿ 3, ಮೈಸೂರು, ದಕ್ಷಿಣ ಕನ್ನಡ, ಕಲಬುರಗಿಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಇನ್ನು ಅನ್ಯಕಾರಣಗಳಿಂದ ನಾಲ್ವರು ಮೃತಪಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 160 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರವೊಂದರಲ್ಲೇ ಬರೋಬ್ಬರಿ 112 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಸಾವನ್ನಪ್ಪಿದವರ ವಿವರ:
1) ರೋಗಿ 10,270: ಕಲಬುರಗಿಯ 61 ವರ್ಷದ ವೃದ್ಧ. ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 22 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್ 23 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
Advertisement
2) ರೋಗಿ 10,274: ದಕ್ಷಿಣ ಕನ್ನಡದ 68 ವರ್ಷದ ವೃದ್ಧೆ. ತೀವ್ರ ಉಸಿರಾಟದ ಸಮಸ್ಯೆ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇವರನ್ನು ಜೂನ್ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಹೈಪೋ ಥೈರಾಯ್ಡಿಸಮ್ ಮತ್ತು ಮಧುಮೇಹದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಜೂನ್ 24 ರಂದು ಸಾವನ್ನಪ್ಪಿದ್ದರು.
Advertisement
3) ರೋಗಿ 10,357: ಮೈಸೂರಿನ 87 ವರ್ಷದ ವೃದ್ಧ. ಬೆಂಗಳೂರಿನ ಪ್ರಯಾಣ ಹಿನ್ನೆಲೆ ಹೊಂದಿದ್ದರು. ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಖಾಯಿಲೆ ಸಮಸ್ಯೆ ಎದುರಿಸುತ್ತಿದ್ದರು. ಜೂನ್ 24 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಂದೇ ಸಾವನ್ನಪ್ಪಿದ್ದರು.
4) ರೋಗಿ 10,402: ಬೆಂಗಳೂರು ಗ್ರಾಮಾಂತರದ 80 ವರ್ಷದ ವೃದ್ಧೆ. ಉಸಿರಾಟದ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದವರನ್ನು ಜೂನ್ 20 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜೂನ್ 23 ರಂದು ಸಾವನ್ನಪ್ಪಿದ್ದರು.
5) ರೋಗಿ 10,403: ಬೆಂಗಳೂರು ಗ್ರಾಮಾಂತರದ 60 ವರ್ಷದ ವೃದ್ಧೆ. ಉಸಿರಾಟದ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದರು. ಜೂನ್ 20 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪಿದ್ದರು.
6) ರೋಗಿ 10,410: ಬೆಂಗಳೂರು 38 ವರ್ಷದ ಪುರುಷ. ಉಸಿರಾಟದ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದರು. ಜೂನ್ 18 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್ 23 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.