Connect with us

Bengaluru City

ರಾಜ್ಯದಲ್ಲಿ ಇಂದು 3,649 ಕೊರೊನಾ ಪ್ರಕರಣ- 61 ಜನ ಸಾವು

Published

on

– ಬೆಂಗಳೂರಲ್ಲಿ 1714, ಇಂದು 22 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 3,649 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು 61 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,664 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಒಟ್ಟು 43,904 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ವರೆಗೆ ಒಟ್ಟು 10,64,734 ಜನರಿಗೆ ಪರೀಕ್ಷೆ ಮಾಡಲಾಗಿದೆ. 71,069 ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ.35.82ರಷ್ಟಿದೆ. ಈ ವರೆಗೆ 1,464 ಜನ ಸಾವನ್ನಪ್ಪಿದ್ದಾರೆ. ಈ ವರೆಗೆ ಒಟ್ಟು 71,069 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಇಂದು 1,714 ಜನರಿಗೆ ಸೋಂಕು ತಗುಲಿದ್ದು, ಒಟ್ಟು 34,943 ಪ್ರಕರಣಗಳು ಪತ್ತೆಯಾದಂತಾಗಿದೆ. ಇದರಲ್ಲಿ ಇನ್ನೂ 26,746 ಸಕ್ರಿಯ ಪ್ರಕರಣಗಳಿವೆ. ಇಂದು 520 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 7,476ಕ್ಕೆ ತಲುಪಿದೆ. 22ಜನ ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ವರೆಗೆ 720 ಜನ ಸಾವನ್ನಪ್ಪಿದಂತಾಗಿದೆ.

Click to comment

Leave a Reply

Your email address will not be published. Required fields are marked *