ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರ ಜೊತೆಗೆ ಮೃತರ ಸಂಖ್ಯೆಯೂ ಏರಿಕೆಯಾಗುತ್ತಿದೆ.
ಡೆಡ್ಲಿ ಕೋವಿಡ್-19ಗೆ ಇಂದು 55 ವರ್ಷದ ರೈತ ಮಹಿಳೆ (ರೋಗಿ-1686) ಬಲಿಯಾಗಿದ್ದಾರೆ. ಈ ಮೂಲಕ ನೆಲಮಂಗಲದಲ್ಲಿ ಮೊದಲ ಸಾವು ದಾಖಲಾದರೆ, ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
Advertisement
Advertisement
ಮೃತ ಮಹಿಳೆಯು ನೆಲಮಂಗಲ ತಾಲೂಕಿನ ವೀರಸಾಗರ ಗ್ರಾಮದ ನಿವಾಸಿ. 55 ವರ್ಷದ ರೈತ ಮಹಿಳೆಯು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅವರ ಶ್ವಾಸಕೋಶಗಳು ಸಂಪೂರ್ಣ ಡ್ಯಾಮೇಜ್ ಆಗಿದ್ದವು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
Advertisement
ತುಮಕೂರು ಜಿಲ್ಲೆಯ ಕೊರಟಗೆರೆ ಅಣ್ಣನ ಮನೆಯಲ್ಲಿದ್ದ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಮೇ 22ರಂದು ತುಮಕೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರ ಗಂಟಲ ದ್ರವವನ್ನು ಕೊರೊನಾ ಟೆಸ್ಟ್‌ಗೆ ಕಳುಹಿಸಿದಾಗ ರಿಪೋರ್ಟ್ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಇಂದು ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ ಎಂದು ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸ್ ಹೇಳಿದ್ದಾರೆ.
Advertisement
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದಿನ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ಮಂಡ್ಯ 15, ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿ 23, ಹಾಸನ 14, ಕಲಬುರಗಿ 6, ದಾವಣಗೆರೆ 4, ಬೀದರ್ 6, ಮಂಡ್ಯ 15, ಕಲಬುರಗಿ 6, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ತಲಾ 2, ವಿಜಯಪುರ, ಧಾರವಾಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಧಾರವಾಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.