Connect with us

Bengaluru City

ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸೋ ಅನಾಚಾರ ಪ್ರದರ್ಶಿಸಿದೆ: ಎಚ್‍ಡಿಕೆ

Published

on

ಬೆಂಗಳೂರು: ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: 24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ. ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ, 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ” ಎಂದಿದ್ದಾರೆ. ಇದನ್ನೂ ಓದಿ: ನಾಲ್ವರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈ ಬಿಟ್ಟ ಸರ್ಕಾರ

“ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ. ಇದನ್ನೂ ಓದಿ: ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ ಯಡಿಯೂರಪ್ಪ

“ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಬಿಜೆಪಿ ಶಾಸಕರಿಗೆ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಮೊದಲ ವರ್ಷದ ಸಂಭ್ರಮದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಶಾಸಕರಿಗೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಈ ಹಿಂದೆ ಸಚಿವ ಸ್ಥಾನ ಆಂಕಾಕ್ಷಿಗಳಾಗಿದ್ದವರಿಗೂ ಸಿಎಂ ಮಣೆ ಹಾಕಿದ್ದಾರೆ.

Click to comment

Leave a Reply

Your email address will not be published. Required fields are marked *