ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Advertisement
ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬದಲಾವಣೆಯ ಹರಿಕಾರರು ಜನ, ನಾನಲ್ಲ: ಉಪೇಂದ್ರ
Advertisement
Advertisement
ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
Advertisement