ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆ ಆರೆಂಜ್ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
Advertisement
ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಮಂದಿ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ತುಂಬಿ ಹರಿಯುತ್ತಿರುವ ಭೀಮಾ ನದಿಯಿಂದ ಅನೇಕ ಸೇತುವೆಗಳು ಜಲಾವೃತಗೊಂಡಿವೆ. ಮಳೆ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಅನೇಕರು ಸಂಕಷ್ಟಕ್ಕೆ ಒಳಗಾದರೆ, ಸಾವಿರಾರು ಹೆಕ್ಟೇರ್ ಬೆಳೆಯೂ ಸಹ ಹಾನಿಯಾಗಿದೆ. ಘತ್ತರಗಿ ಬಳಿ ಸೇತುವೆ ಮುಳುಗಡೆಯಾಗಿರುವುದರಿಂದ ಅಫಜಲಪುರ ಜೇವರ್ಗಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
Advertisement
Advertisement
ಕಾಫಿನಾಡಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತದ ಭೀತಿ ಎದುರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಂತ ಮಳೆಯಿಂದ ಸುಮಾರು ನಾಲ್ಕೈದು ಕಡೆ ಭೂಕುಸಿತ ಉಂಟಾಗಿದೆ. ಕುಸಿದ ಗುಡ್ಡದ ಮಣ್ಣನ ಜೆಸಿಬಿ ಮೂಲಕ ಸರಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
Advertisement
ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಹುತೇಕ ಬೆಳೆಗಳು ನಾಶವಾಗಿವೆ. ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸೋಯಾಬಿನ್ ಬೆಳೆದಿದ್ರು. ಆದರೆ ಬೆಳೆ ಕಿಳಬೇಕು ಎನ್ನುವಷ್ಟರಲ್ಲಿ ಮಳೆ ಬಂದಿದ್ದರಿಂದ ಬಹುತೇಕ ಸೊಯಾಬಿನ್ ಮೊಳಕೆಯೊಡೆಯುವಂತೆ ಆಗಿದೆ. ಇದಲ್ಲದೇ ಹೆಸರು, ಉದ್ದು, ಮೆಕ್ಕಜೋಳ ಹಾಗೂ ಶೇಂಗಾ ಬೆಳೆ ಕೂಡ ಹಾಳಾಗಿವೆ.