ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ತಿಳಿದು ಬಂದಿದೆ.
ಎಂಟು ವಲಯಗಳ ಉಸ್ತುವಾರಿ ಸಚಿವರು 10 ದಿನಗಳ ವರ್ಕ್ ರಿಪೋರ್ಟ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. 10 ದಿನಗಳ ವರ್ಕ್ ರಿಪೋರ್ಟಿನಲ್ಲಿ ವಲಯವಾರು ಕೊರೊನಾ ನಿಯಂತ್ರಣ, ನಿರ್ವಹಣೆಗೆ ಕೈಗೊಂಡ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಆದರೆ ಅಷ್ಟ ದಿಕ್ಪಾಲಕರ ವರ್ಕ್ ರಿಪೋರ್ಟ್ಗೆ ಸಿಎಂ ಯಡಿಯೂರಪ್ಪ ಅತೃಪ್ತಿ ಆಗಿದ್ದಾರೆ. ಇದೀಗ ಅಷ್ಟ ಸಚಿವರ ಕಾರ್ಯ ನಿರ್ವಹಣೆ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.
ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಬಗ್ಗೆ ಬಿಜೆಪಿ ಹೈಕಮಾಂಡ್ ಅತೃಪ್ತಿಯಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ವಿಚಾರದಲ್ಲಿ ಹೆಚ್ಚು ಪಾಸಿಟಿವ್ ಬರುತ್ತಿದೆ. ಆದರೆ ಸರ್ಕಾರ ಮತ್ತು ಪಕ್ಷ ಏನು ಮಾಡುತ್ತಿದೆ. ಇಬ್ಬರ ನಡುವೆ ಸಮನ್ವಯತೆ ಇಲ್ಲವೇ ಇಲ್ಲ. ಬಿಜೆಪಿ ಅಧ್ಯಕ್ಷರು ಎಷ್ಟು ಜನ ಸಚಿವರನ್ನ ಕರೆದು ಸಭೆ ಮಾಡಿದ್ದೀರಿ? ಎಂದು ಹೈಕಮಾಂಡ್, ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದೆ.
ಅಲ್ಲದೇ ವಿರೋಧ ಪಕ್ಷಗಳ ಆರೋಪಕ್ಕೆ ಪಕ್ಷ, ಸರ್ಕಾರ ಏನು ಉತ್ತರ ಕೊಟ್ಟಿದೆ? ಕರ್ನಾಟಕದಲ್ಲಿ ಆಗುವ ಪ್ರತಿ ಫೇಲ್ಯೂರ್‌ಗೆ ಪಕ್ಷ, ಸರ್ಕಾರ ಇಬ್ಬರು ಹೊಣೆ ಎಂದು ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ. ಹೀಗಾಗಿ ಉಪಕರಣಗಳ ಖರೀದಿ ಬಗ್ಗೆ ಸಂಪೂರ್ಣ ಮಾಹಿತಿ ರವಾನಿಸುವಂತೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಹೈಕಮಾಂಡ್ ಗರಂ ಆಗಲು ಕಾರಣ?
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯಾವ ಸಚಿವರ ಜೊತೆಯೂ ಸಭೆ ನಡೆಸಿಲ್ಲ. ಅಲ್ಲದೇ ಸರ್ಕಾರದ ಜೊತೆ ಸಭೆ ನಡೆಸುವ ಪ್ರಯತ್ನವನ್ನು ಮಾಡಿಲ್ಲ ಎಂಬುದು ರಾಜ್ಯ ಸರ್ಕಾರದ ಮೇಲೆ ಹೈಕಮಾಂಡ್ ಗರಂ ಆಗಲು ಕಾರಣ ಎನ್ನಲಾಗಿದೆ.
ಇದರ ಜೊತೆಯಲ್ಲಿ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಸರಿಯಾಗಿ ಉತ್ತರ ಕೊಡುತ್ತಿಲ್ಲ. ಅಲ್ಲದೇ ಬೆಂಗಳೂರಿನಿಂದ ಬೇರೆ ಬೇರೆ ಕಡೆಗೆ ಜನರು ವಲಸೆ ಹೋಗುತ್ತಿರುವುದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಮತ್ತೊಂದು ಉಪಕರಣಗಳ ಖರೀದಿಯಲ್ಲಿ ಹಗರಣ ಆಗಿದೆ ಎಂದು ಆರೋಪಿಗಳು ಕೇಳಿ ಬರುತ್ತಿತ್ತು. ಈ ಎರಡು ಪ್ರಕರಣಗಳು ಹೈಕಮಾಂಡ್ ಅಂಗಳಕ್ಕೆ ಹೋಗಿದೆ. ಆದರೆ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಈ ಎಲ್ಲಾ ಕಾರಣಗಳಿಂದ ಹೈಕಮಾಂಡ್ ರಾಜ್ಯ ಸರ್ಕಾರದ ಮೇಲೆ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ.
ಹೈಕಮಾಂಡ್ ಗರಂ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ನಳೀನ್ ಕುಮಾರ್ ಕಟೀಲ್ ಬಂದು ಭೇಟಿ ಮಾಡಿದ್ದು, ಸುಮಾರು ಒಂದು ಗಂಟೆಗಳ ಕಾಲ ಬಿಸಿಬಿಸಿ ಚರ್ಚೆ ಮಾಡಿದ್ದಾರೆ. ಜೊತೆಗೆ ಹೈಕಮಾಂಡ್ ಗರಂ ಬಗ್ಗೆ ಉಭಯ ನಾಯಕರು ಗಂಭೀರ ಮಾತುಕತೆ ನಡೆಸಿದ್ದಾರೆ.