ವಿಜಯಪುರ: ರಾತ್ರಿ ವೇಳೆ ಸಾಕು ಪ್ರಾಣಿಗಳನ್ನ ಬೇಟೆಯಾಡುವ ಮೂಲಕ ಜಿಲ್ಲೆಯ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿ ಬಿದ್ದಿದೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಗ್ರಾಮದ ಹೊರವಲಯದಲ್ಲಿ ಚಿರತೆ ಬಲೆಗೆ ಬಿದ್ದಿದೆ. ಕಳೆದ ಒಂದು ವಾರದಿಂದ ಬಬಲೇಶ್ವರ ತಾಲೂಕಿನ ಬಬಲಾದಿ, ದೇವರಗೆಣ್ಣೂರು, ಗುಣದಾಳ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಈ ಚಿರತೆಯ ಹಾವಳಿ ಹೆಚ್ಚಾಗಿತ್ತು.
Advertisement
Advertisement
ಅಷ್ಟೇ ಅಲ್ಲದೇ ರಾತ್ರಿ ಹೊತ್ತು ಎಮ್ಮೆ, ಮೇಕೆ, ಸಾಕು ಪ್ರಾಣಿಗಳ ಬೇಟೆಯಾಡುವ ಮೂಲಕ ಜನರ ನೆಮ್ಮದಿ ಹಾಗೂ ನಿದ್ದೆ ಕೆಡಿಸಿತ್ತು. ಹೀಗಾಗಿ ಅರಣ್ಯ ಇಲಾಖೆಯವರು ಕಳೆದ ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು. ಪರಿಣಾಮ ಕೊನೆಗೂ ಚಿರತೆ ಸೆರೆ ಸಿಕ್ಕಿದೆ.
Advertisement
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಚಿರಾಂಕ ವನ್ಯಜೀವಿ ಪ್ರದೇಶದಿಂದ ಚಿರತೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಲಾಕ್‍ಡೌನ್ ವೇಳೆ ಜನ, ವಾಹನ ಸಂಚಾರ ಕಡಿಮೆಯಾಗಿದ್ದರಿಂದ ಕೃಷ್ಣಾ ನದಿ ದಾಟಿ ಬಂದಿರುವ ಶಂಕೆ ವ್ಯಕ್ತವಾಗಿದೆ.