ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿ ರೆಡ್ಡಿಗಳ ಮೂಲಕ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಾಗಿತ್ತು. ಆದರೆ ದಿನೇ ದಿನೇ ರೆಡ್ಡಿಗಳ ಪಾರುಪತ್ಯ ಜಿಲ್ಲೆಯಲ್ಲಿ ಕಡಿಮೆಯಾದಂತೆ ಕಾಣಿಸುತ್ತಿದೆ. ಅದರಲ್ಲೂ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗವಾದ ಮೇಲಂತೂ ಈ ಸಂಶಯ ರಾಜಕೀಯ ವಲಯದಲ್ಲಿ ಮತ್ತಷ್ಟು ಜೋರಾಗಿದೆ. ಇದೆಲ್ಲದರ ನಡುವೆಯೂ ಸಚಿವ ರಾಮುಲು, ರೆಡ್ಡಿ ಬ್ರದರ್ಸ್ ಜೊತೆಗಿದ್ದರೆ ಯಾರು ಏನು ಮಾಡಿಕೊಳ್ಳಲು ಆಗಲ್ಲ ಎಂಬ ಮಾತಿತ್ತು. ಆದರೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಬ್ರದರ್ಸ್ ಮತ್ತು ರಾಮುಲು ನಡುವೆ ಬಿರುಕು ಉಂಟಾಗಿದೆ.
Advertisement
ಈ ಹಿಂದೆ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿದ್ದ ಸಚಿವ ರಾಮುಲು ತಮ್ಮ ನಡೆ ಬದಲಿಸಿದ್ದಾರೆ. ರಾಮುಲು ವಿಜಯನಗರ ಜಿಲ್ಲೆ ರಚನೆ ಪರ ಬ್ಯಾಟ್ ಬೀಸಿದ ಪರಿಣಾಮ ಬಳ್ಳಾರಿಯಲ್ಲಿ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಸಚಿವ ಆನಂದ್ ಸಿಂಗ್ ಜೊತೆ ರಾಮುಲು ರಾಜಕೀಯ ಒಪ್ಪಂದಕ್ಕೆ ಒಳಗಾಗಿ ನೂತನ ಜಿಲ್ಲೆ ರಚನೆಗೆ ಕೈ ಜೋಡಿಸಿದರು ಎಂಬ ಆರೋಪ ಕೇಳಿ ಬಂದಿದೆ. ಇದುವೇ ರೆಡ್ಡಿ ಬ್ರದರ್ಸ್ ಮುನಿಸಿಗೆ ಕಾರಣ ಎಂಬ ಮಾತು ಕೇಳಿ ಬಂದಿದೆ.
Advertisement
Advertisement
ಒಂದು ವೇಳೆ ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿ ರಾಮುಲು ತಮ್ಮ ನಿಲುವನ್ನ ಬದಲಿಸಿದಿದ್ದರೇ ರೆಡ್ಡಿ ಬ್ರದರ್ಸ್ ಕುಟುಂಬದ ಅಸಮಾಧಾನಕ್ಕೆ ಕಾರಣವಾಗುತ್ತಿರಲಿಲ್ಲ. ವಿಜಯನಗರ ಜಿಲ್ಲೆ ರಚನೆಯಿಂದ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ರೆಡ್ಡಿ ಪಾರುಪತ್ಯ ಪೂರ್ತಿ ತೆರೆಮರೆಗೆ ಸರಿಯುತ್ತಿರುವುದರಿಂದ ರೆಡ್ಡಿ ಬ್ರದರ್ಸ್ ಸಿಟ್ಟಾಗಿದ್ದಾರೆ. ಅಲ್ಲದೆ ಒಂದು ಹೆಜ್ಜೆ ಮುಂದೆ ಹೋಗಿರುವ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಬಳ್ಳಾರಿಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಸೇರ್ಪಡೆ ವಿಚಾರವನ್ನ ವಿರೋಧಿಸಿದ್ದಾರೆ. ಇದು ಈಗ ರಾಜಕೀಯ ಚರ್ಚೆಗೆ ಕಾರಣವಾಗಿದೆ.
Advertisement
ಮೊಳಕಾಲ್ಮೂರು ಶಾಸಕರಾಗಿರುವ ರಾಮುಲು ತಮ್ಮ ವಿಧಾನಸಭಾ ಕ್ಷೇತ್ರವನ್ನ ಬಳ್ಳಾರಿಗೆ ಸೇರಿಸಿ, ಜಿಲ್ಲೆಯ ಉಸ್ತುವಾರಿ ಪಡೆಯಬೇಕೆಂಬ ಹಂಬಲ ಹೊಂದಿದ್ದಾರೆ ಎನ್ನಲಾಗಿದೆ. ಇತ್ತ ಆಡಳಿತ ಪಕ್ಷದ ಸೋಮಶೇಖರ್ ರೆಡ್ಡಿ ವಿರೋಧ ವ್ಯಕ್ತಪಡಿಸಿರುವುದು ರಾಮುಲು ಅವರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ, ಸಚಿವ ಆನಂದ ಸಿಂಗ್ ಆಶಯದಂತೆ ಅಖಂಡ ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿದೆ. ಸರ್ಕಾರದ ಈ ನಿರ್ಧಾರ ರೆಡ್ಡಿ ಸೋದರರು ಮತ್ತು ಶ್ರೀರಾಮುಲು ಗೆಳೆತನದಲ್ಲಿ ಬಿರುಕು ಮೂಡಿಸಿದೆ.