Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿಗಳಿಂದ ನಾಳೆ ತಲಕಾವೇರಿಯಲ್ಲಿ ಪೂಜೆ- ಮಂಜಿನ ನಗರಿ ಸಜ್ಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಷ್ಟ್ರಪತಿಗಳಿಂದ ನಾಳೆ ತಲಕಾವೇರಿಯಲ್ಲಿ ಪೂಜೆ- ಮಂಜಿನ ನಗರಿ ಸಜ್ಜು

Karnataka

ರಾಷ್ಟ್ರಪತಿಗಳಿಂದ ನಾಳೆ ತಲಕಾವೇರಿಯಲ್ಲಿ ಪೂಜೆ- ಮಂಜಿನ ನಗರಿ ಸಜ್ಜು

Public TV
Last updated: February 5, 2021 4:41 pm
Public TV
Share
2 Min Read
MDK RAM NATH KOVIND
SHARE

– ಜನರಲ್ ತಿಮ್ಮಯ್ಯರ ಸನ್ನಿಸೈಡ್ ಮ್ಯೂಸಿಯಂ ಉದ್ಘಾಟಿಸಲಿರುವ ಕೋವಿಂದ್

ಮಡಿಕೇರಿ: ಸೇನೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಸ್ವಕುಟುಂಬ ಸಮೇತರಾಗಿ ನಾಳೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಈಗಾಗಲೇ ತಲಕಾವೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದು, ತಲಕಾವೇರಿಯ ಹೆಬ್ಬಾಗಿಲಿನಲ್ಲೇ ಸೇನೆ ಬಿಡಾರಗಳನ್ನು ಹಾಕಿ ಹೈ ಅಲರ್ಟ್ ಆಗಿದೆ. ತಲಕಾವೇರಿಯ ಎಲ್ಲಡೆ ರೆಡ್ ಕಾರ್ಪೆಟ್ ಹಾಕಿ ಸಿದ್ಧಗೊಳಿಸಲಾಗಿದೆ. ಬಾಗಮಂಡಲ ಸಮೀಪದ ಚೆಟ್ಟಿಮಾನಿಯಲ್ಲಿ ಸಿದ್ಧಗೊಂಡಿರುವ ಹೆಲಿಪ್ಯಾಡ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ರಾಮನಾಥ್ ಕೋವಿಂದ್ ಅವರು ಇಳಿಯಲಿದ್ದಾರೆ. ಬಳಿಕ ಕಾರಿನ ಮೂಲಕ ತಲಕಾವೇರಿಗೆ ತೆರಳಿಲಿದ್ದು, 12:30ರ ವರೆಗೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿದ್ದಾರೆ.

MDK RAM NATH KOVIND 2 8

ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಬಾಗಮಂಡಲದಿಂದ ತಲಕಾವೇರಿಯವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಪೊಲೀಸ್, ಸೇನಾಧಿಕಾರಿಗಳು, ಅಗ್ನಿಶಾಮಕ ದಳ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ರೂಟ್ ಮಾರ್ಚ್ ಮಾಡಿ ಪೂರ್ವ ತಯಾರಿ ನಡೆಸಿದ್ದಾರೆ.

TALAKAVERI 768x407 1

ಸೇನೆಯ ಅತ್ಯುನ್ನತ್ತ ಹುದ್ದೆಯನ್ನು ಅಲಂಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತ್ತಿಸಿಕೊಂಡಿದ್ದ ಕೊಡಗಿನ ಕೆ.ಎಸ್.ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಅನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಳೆ ಉದ್ಘಾಟಿಸಲಿದ್ದಾರೆ. ಮ್ಯೂಸಿಯಂ ಈಗಾಗಲೇ ಸಂಪೂರ್ಣ ಸಿದ್ಧಗೊಂಡಿದೆ. ಯುದ್ಧಟ್ಯಾಂಕರ್, ಸೂಪರ್ ಸಾನಿಕ್ ಯುದ್ಧವಿಮಾನ ಮುಂತಾದವುಗಳನ್ನು ಅಂತಿಮವಾಗಿ ಸಿದ್ಧಗೊಳಿಸಲಾಗುತ್ತಿದೆ.

MDK RAM NATH KOVIND 2 5

ಇಡೀ ಮ್ಯೂಸಿಯಂ ಸಿಂಗಾರಗೊಂಡಿದ್ದು, ವೈಮಾನಿಕ ದೃಶ್ಯವನ್ನು ನೀವೂ ಕಣ್ತುಂಬಿಕೊಳ್ಳಬಹುದು. ಯುದ್ಧ ಸ್ಮಾರಕ ಮತ್ತು ಮ್ಯೂಸಿಯಂ ಒಳಗೆ ಹಾಗೂ ಹೊರಗೆ ಸಂಪೂರ್ಣ ಸೈನಿಕರು ಮತ್ತು ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮ್ಯೂಸಿಯಂ ಒಳಗೆ ಈಗಾಗಲೇ ಡಾಗ್ ಸ್ಕ್ವಾಡ್ ಕೂಡ ಪರಿಶೀಲನೆ ನಡೆಸಿದ್ದು, ಮ್ಯೂಸಿಯಂ ಮತ್ತು ಯುದ್ಧ ಸ್ಮಾರಕ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಸಂಪೂರ್ಣ ಪೊಲೀಸ್ ಮತ್ತು ಸೈನಿಕರ ಹಿಡಿತದಲ್ಲಿದೆ.

MDK RAM NATH KOVIND 2 6

ನಾಳೆ ಮಧ್ಯಾಹ್ನ ಒಂದು ಗಂಟೆಗೆ ಮಡಿಕೇರಿಯ ಎಫ್‍ಎಂಸಿ ಕಾಲೇಜು ಮೈದಾನದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಗೆ ಬರಲಿರುವ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಲ್ಲಿಂದ ಆರ್ಮಿ ಕ್ಯಾಂಟೀನ್, ಎಲ್‍ಐಸಿ ರಸ್ತೆ ರಾಜಾಸೀಟ್ ರಸ್ತೆ ಮತ್ತು ಈಸ್ಟ್ ಎಂಡ್ ಹೊಟೇಲ್ ರಸ್ತೆ ಮೂಲಕ ಸುದರ್ಶನ್ ಗೆಸ್ಟ್ ಹೌಸ್ ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಿಮ್ಮಯ್ಯ ಮ್ಯೂಸಿಯಂಗೆ ಆಗಮಿಸಲಿರುವ ರಾಮನಾಥ್ ಕೋವಿಂದ್, 45 ನಿಮಿಷಗಳ ಕಾಲ ಮ್ಯೂಸಿಯಂನಲ್ಲೇ ಇರಲಿದ್ದಾರೆ. ಬಳಿಕ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

TAGGED:madikeriPublic TVramnath kovindSunnyside MuseumTala Kaveriತಲಕಾವೇರಿಪಬ್ಲಿಕ್ ಟಿವಿಮಡಿಕೇರಿರಾಮ್‍ನಾಥ್ ಕೋವಿಂದ್ಸನ್ನಿಸೈಡ್ ಮ್ಯೂಸಿಯಂ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
4 minutes ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
15 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
20 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
36 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
57 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?