ಬೀದರ್: ರಾಷ್ಟ್ರೀಯ ಹೆದ್ದಾರಿಯಲ್ಲಿ 9 ರಲ್ಲಿ ಹೊಂಚು ಹಾಕಿ ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.
ಮೇ 17 ರಂದು ಕೆಮಿಕಲ್ ಲಾರಿಯನ್ನು ಅಡ್ಡಗಟ್ಟಿ ಸುಲಿಗೆ ಮಾಡಿ ಕೆಮಿಕಲ್ ಲಾರಿ ಸಮೇತ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
Advertisement
ಮಹಾರಾಷ್ಟ್ರದ ಮೂಲದ 31 ವರ್ಷದ ಧನ್ನರಾಜ್ ಪಾರವೇ ಹಾಗೂ 22 ವರ್ಷದ ಯೋಗೇಶ್ ಬಂಡಗರ ಬಂಧಿತ ಆರೋಪಿಗಳು. ಬಂಧಿತರಿಂದ ಲಾರಿ ಸೇರಿದಂತೆ 38 ಲಕ್ಷ ಜಪ್ತಿ ಮಾಡಿ, ಆರೋಪಿಗಳನ್ನು ಹುಮ್ನಬಾದ್ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 17 ರಂದು ಹುಮ್ನಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹಣ್ಣಿನ ವಾಹನದಲ್ಲಿ ಗೋಮಾಂಸ ಸಾಗಾಟ – ಮೂವರು ಆರೋಪಿಗಳ ಬಂಧನ
Advertisement
ಎಸ್ಪಿ ನಾಗೇಶ್ ಡಿಎಲ್, ಎಎಸ್ಪಿ ಗೋಪಾಲ್ ಬ್ಯಾಕೋಡ್, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ರವಿಕುಮಾರ್ ಅಪರಾಧ ವಿಭಾಗದ ಕಿರಣಕುಮಾರ, ಸಂಚಾರ ಪೊಲೀಸ್ ಠಾಣೆಯ ಬಸವರಾಜ್ ಹಾಗೂ ಸಿಬ್ಬಂದಿ ಈ ವೇಳೆ ಹಾಜರಿದ್ದರು.