ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆ ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದರು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ನಿರ್ಧಾರದಿಂದ ಹಿಂದೆ ಸರಿಯಲು ಅಣ್ಣಾ ಹಜಾರೆ ತೀರ್ಮಾನಿಸಿದ್ದಾರೆ.
Advertisement
ಕಳೆದ ನಾಲ್ಕು ವರ್ಷಗಳಿಂದ ರೈತರ ಪ್ರಮುಖ ಬೇಡಿಕೆಗಳಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಆದರೆ ಸರ್ಕಾರ ರೈತರ ಬಗ್ಗೆ ಪ್ರಾಮುಖ್ಯತೆ ನೀಡುತ್ತಿಲ್ಲ. ರೈತರ ಸಮಸ್ಯೆ ಕುರಿತಾಗಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿ ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದರು.
Advertisement
Advertisement
ಮಹಾರಾಷ್ಟ್ರದ ಅಹ್ಮದ್ನಗರ್ ನಲ್ಲಿ ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಎಲ್ಲಾ ತಯಾರಿ ನಡೆಸಿದ್ದ ಅಣ್ಣಾ ಹಜಾರೆ ಅವರನ್ನು ಇಂದು ಕೇಂದ್ರ ರಾಜ್ಯ ಖಾತೆ ಸಚಿವ ಕೈಲಾಸ್ ಚೌದರಿ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿಯಾಗಿ ಉಪವಾಸ ಸತ್ಯಾಗ್ರಹ ಮಾಡದಂತೆ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಒಪ್ಪಿಗೆ ಸೂಚಿಸಿರುವ ಅಣ್ಣಾ ಹಜಾರೆ ನಾಳೆಯಿಂದ ನಡೆಯಬೇಕಿದ್ದ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ ಎಂದು ವರದಿಯಾಗಿದೆ.
Advertisement