ಬೆಂಗಳೂರು: ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ಸರ್ಕಾರಿ ನಿವಾಸದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸ್ವಿಮ್ಮಿಂಗ್ ಪೂಲ್ ಮಾಡಿಸಿದ ಕ್ರಮ ಸಾಕಷ್ಟು ಟೀಕೆಗೆ ಒಳಗಾಯ್ತು. ಈಗ ಐಜಿಪಿ ರೂಪಾ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ತಿವಿದಿದ್ದಾರೆ.
ಕೋರೋನ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ.ಕಟ್ಟುವುದ ಮುಂದೂಡಲೂಬಹುದಿತ್ತು
— D Roopa IPS (@D_Roopa_IPS) June 23, 2021
Advertisement
ಕೊರೊನಾ ಹಾಗೂ ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಕಟ್ಟುವುದನ್ನು ಮುಂದೂಡಬಹುದಿತ್ತು ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ
Advertisement
ಟ್ವೀಟ್ನಲ್ಲಿ ರೋಹಿಣಿ ಫೋಟೋ ಹಾಕಿ ಡಿ ರೂಪ ಉಲ್ಲೇಖ ಮಾಡಿದ್ದಾರೆ. ರೂಪಾ ಅವರ ಟ್ವೀಟ್ಗೆ ಸಿಂಧೂರಿ ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಮೂಡಿದೆ.