”ಲಕ್ಷ್ಮಣ ಸವದಿ ಮುಂದಿನ ಸಿಎಂ” ಪೋಸ್ಟ್​​ಗೆ ಕಟೀಲ್ ಗರಂ

-ಮುಂದಿನ 3 ವರ್ಷ ಬಿಎಸ್‍ವೈ ಸಿಎಂ

ಚಾಮರಾಜನಗರ: ಮುಂದಿನ ಸಿಎಂ ಲಕ್ಷ್ಮಣ ಸವದಿ ಪೋಸ್ಟ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪೋಸ್ಟ್ ಹಾಕಿದ ಲಕ್ಷ್ಮಣ ಸವದಿ ಅಭಿಮಾನಿಗಳು ಪಾರ್ಟಿ ಅಲ್ಲ. ಪೋಸ್ಟ್ ಹಾಕಿದವರು ಪಕ್ಷದ ವ್ಯವಸ್ಥೆಯಲ್ಲಿಯೂ ಇಲ್ಲ. ನಮ್ಮ ಪಾರ್ಟಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಡಿಸಿಎಂ ಲಕ್ಷ್ಮಣ ಸವದಿ ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಬೇಡ ಎಂದರು. ಇದನ್ನೂ ಓದಿ: ದೆಹಲಿ ಬೆಳವಣಿಗೆಗಳ ಬಗ್ಗೆ ಸಿಎಂಗೆ ಸ್ಪಷ್ಟನೆ ಕೊಟ್ಟ ಡಿಸಿಎಂ ಲಕ್ಷ್ಮಣ ಸವದಿ

- Advertisement -

ಯಡಿಯೂರಪ್ಪನವರೇ ಮುಂದಿನ ಮೂರು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಮಾಡೋದು ಶಾಸಕರು. ಆದರೆ ಯಾವ ಶಾಸಕರಾಗಲಿ, ಮಂತ್ರಿಗಳಾಗಲಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಇನ್ನು ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

- Advertisement -

- Advertisement -