ಶಿವಮೊಗ್ಗ: ಕಠಿಣ ಲಾಕ್ ಡೌನ್ ನಡುವೆ ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
Advertisement
ಶಿವಮೊಗ್ಗದ ಸಿದ್ದಯ್ಯ ರಸ್ತೆ ಹಾಗೂ ಎಂಕೆಕೆ ರಸ್ತೆಯಲ್ಲಿ ಕಾರುಗಳ ಮಾಲೀಕರು ತಮ್ಮ ತಮ್ಮ ಕಾರುಗಳನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಆದರೆ ಮಧ್ಯರಾತ್ರಿ 1.30ರ ಸುಮಾರಿಗೆ ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು 17 ಕಾರುಗಳು, ಆಟೋ ಹಾಗೂ ಬೈಕ್‍ಗಳನ್ನು ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ.
Advertisement
Advertisement
ಘಟನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ನಗರದಲ್ಲಿ ಪದೇ ಪದೇ ಇಂತಹ ದುಷ್ಕøತ್ಯ ನಡೆಯುತ್ತಿದೆ. ಪೊಲೀಸರು ಇಂತಹ ಸಮಾಜ ಘಾತುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
Advertisement
ಇಡೀ ದೇಶ ಕೊರೊನಾ ಸಂಕಷ್ಟಕ್ಕೆ ಸಿಲುಕಿದೆ. ಪೊಲೀಸರು ಲಾಕ್‍ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಸಮಯದಲ್ಲಿ ಕಿಡಿಗೇಡಿಗಳು ಇಂತಹ ದುಷ್ಕೃತ್ಯ ಮೆರೆದಿದ್ದಾರೆ. ದುಷ್ಕೃತ್ಯ ನಡೆಸಿರುವ ಇಬ್ಬರು ಯುವಕರನ್ನು ಸ್ಥಳಿಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೊಡ್ಡಪೇಟೆ ಪೊಲೀಸರು ಈಗಾಗಲೇ ಇಬ್ಬರು ಕಿಡಿಗೇಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಅಷ್ಟೇ ಅಲ್ಲದೇ ಇನ್ನು ಕೆಲವು ಕಿಡಿಗೇಡಿಗಳು ಇರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪೊಲೀಸರಿಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.