ಬೆಳಗಾವಿ: ಲೋಕಸಭೆ ಉಪ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಕದನಕ್ಕೆ ಕಾಂಗ್ರೆಸ್ ನಿಂದ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾದ್ಯಕ್ಷರಾದ ಸತೀಶ್ ಜಾರಕಿಹೊಳಿ ಟಿಕೆಟ್ ನೀಡಿ ಲೋಕಸಭೆಗೆ ಕಳುಹಿಸುವ ತಯಾರಿಯಲ್ಲಿದ್ದಾರೆ. ಆದರೆ ಸ್ವಕ್ಷೇತ್ರ ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
Advertisement
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ಯಮಕನಮರಡಿ ಮತ ಕ್ಷೇತ್ರದ ಯುವ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿಯವರು ಯಮಕನಮರಡಿ ಶಾಸಕರಾಗಿಯೇ ಮುಂದುವರಿಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಟಿಕೆಟ್ ನೀಡದಂತೆ ಹೈಕಮಾಂಡ್ ಮನವಿ ಮಾಡಿದ್ದಾರೆ.
Advertisement
Advertisement
ಮುಂದಿನ ಸಿಎಂ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನ ಸೈಡ್ ಲೈನ್ ಮಾಡುವ ಹುನ್ನಾರ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಪರಿಸ್ಥಿತಿ ಸತೀಶ್ ಜಾರಕಿಹೊಳಿ ಅವರಿಗೆ ಬರಬಹುದು. ರಾಜ್ಯ ನಾಯಕರ ಹುನ್ನಾರದಿಂದ ದಲಿತ ನಾಯಕ ಸತೀಶ್ ಜಾರಕಿಹೊಳಿ ಅವರನ್ನ ಸೈಡ್ ಲೈನ್ ಮಾಡುವ ವ್ಯವಸ್ಥೆ ನಡೆದಿದೆ ಎಂದು ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಆರೋಪಿಸಿದ್ದಾರೆ.