– ಇಂದಿನಿಂದಲೇ ಟಫ್ ರೂಲ್ಸ್ ಜಾರಿ
ಹಾಸನ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಇಂದಿನಿಂದಲೇ ಟಫ್ರೂಲ್ಸ್ ಜಾರಿ ಮಾಡಲಾಗಿದೆ. ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡಲು ಜಿಲ್ಲಾಉಸ್ತುವಾರಿ ಸಚಿವ ಗೋಪಾಲಯ್ಯ ಆದೇಶ ಹೊರಡಿಸಿದ್ದಾರೆ.
Advertisement
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಶಾಸಕರು, ಸಂಸದರು, ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಪ್ರಸ್ತುತ ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚಿಸಿದ್ರು. ಈ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಜನಪ್ರತಿನಿಧಿಗಳು ಕೊರೊನ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದರು.
Advertisement
ಈ ಹಿನ್ನೆಲೆಯಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಾತ್ರ ಬೆ.6 ರಿಂದ 10 ರವರೆಗೆ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಬಾರ್ ಗಳಿಗೂ ಅದೇ ದಿನಗಳು ಮಾತ್ರ ನಿಗದಿತ ಸಮಯ ತೆರೆಯಬೇಕು. ಆನಂತರ ಸಂಪೂರ್ಣ ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ.
Advertisement
Advertisement
ಉಳಿದ ನಾಲ್ಕು ದಿನಗಳು ಹಾಲಿನ ಡೈರಿ, ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್ ಗಳನ್ನು ಬಿಟ್ಟು ಉಳಿದೆಲ್ಲವೂ ಸಂಪೂರ್ಣ ಬಂದ್ ಮಾಡುವಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಆದೇಶ ನೀಡಿದ್ದಾರೆ.