ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ತಂಡದ ಆಟಗಾರನಾಗಿ ಮತ್ತು ನಾಯಕನಾಗಿ ಹಲವಾರು ದಾಖಲೆಗಳ ಸರದಾರನಾಗಿದ್ದಾರೆ. ತನ್ನ ಅದ್ಭುತ ಬ್ಯಾಟಿಂಗ್ ಶೈಲಿಯಿಂದ ಅದೆಷ್ಟೋ ಪಂದ್ಯಗಳನ್ನು ಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. ಈಗಾಗಲೇ ಕೊಹ್ಲಿಯ ಕ್ರಿಕೆಟ್ ಸಾಧನೆಗಾಗಿ ಹಲವಾರು ಪ್ರಶಸ್ತಿಗಳು ಸಂದಿವೆ. ಇದೀಗ ಅವರ ಪ್ರಶಸ್ತಿಯ ಮುಡಿಗೆ 2010 ರಿಂದ 2021ರ ದಶಕದ ವಿಸ್ಡನ್ ಕ್ರಿಕೆಟರ್ ಅಲ್ಮನ್ಯಾಕ್ ಪ್ರಶಸ್ತಿ ಸೇರಿಕೊಂಡಿದೆ.
Advertisement
ಹೌದು ವಿರಾಟ್ ಕೊಹ್ಲಿ 2008ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ ನಂತರ ಒಂದಲ್ಲ ಒಂದು ರೀತಿಯಿಂದ ಭಾರತ ತಂಡಕ್ಕೆ ನೆರವಾಗಿ, ಹಲವು ಪ್ರಶಸ್ತಿಗಳನ್ನು ಗೆಲ್ಲಲು ಸಹಕಾರಿಯಾಗಿದ್ದಾರೆ. 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯನಾಗಿದ್ದ ವಿರಾಟ್ ಆ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ತನ್ನ ಬ್ಯಾಟಿಂಗ್ ಪರಾಕ್ರಮ ಮೆರೆದಿದ್ದಾರೆ ಅದರಲ್ಲೂ ಏಕದಿನ ಕ್ರಿಕೆಟ್ನಲ್ಲಿ ಕಳೆದ ಮೂರು ವರ್ಷಗಳಿಂದ ನಂಬರ್ವನ್ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಈ ಎಲ್ಲಾ ಸಾಧನೆಗಳನ್ನು ಗಮನಿಸಿ ಪ್ರತಿಷ್ಠಿತ ವಿಸ್ಡನ್ ಅಲ್ಮನ್ಯಾಕ್ ದಶಕದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಕೊಹ್ಲಿಗೆ ಒಲಿದಿದೆ.
Advertisement
Advertisement
ಭಾರತದ ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್ ಮತ್ತು ಸಚಿನ್ ತೆಂಡೂಲ್ಕರ್ ಈ ಹಿಂದೆ 1980 ಮತ್ತು 1990ರಲ್ಲಿ ವಿಸ್ಡನ್ ಅಲ್ಮನ್ಯಾಕ್ ದಶಕದ ಏಕದಿನ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದರು. ಆ ಬಳಿಕ ಇದೀಗ ವಿರಾಟ್ ಕೊಹ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Advertisement
ವಿರಾಟ್ ಕೊಹ್ಲಿ 2011ರ ಏಕದಿನ ವಿಶ್ವಕಪ್ ವಿಜೇತ ಟೀಂ ಇಂಡಿಯಾ ಸದಸ್ಯನಾಗಿ, ಚಾಂಪಿಯನ್ ಟ್ರೋಫಿ ವಿಜೇತ ಭಾರತ ತಂಡದ ಸದಸ್ಯನಾಗಿ ಕಾಣಿಸಿಕೊಂಡಿದ್ದರು. ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ 254 ಪಂದ್ಯಗಳಿಂದ 60ರ ಸರಾಸರಿಯಲ್ಲಿ 43 ಶತಕ ಮತ್ತು 62 ಅರ್ಧಶತಕ ಸಹಿತ 12,169 ರನ್ ಕಲೆಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದಶಕದ ಏಕದಿನ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದಾರೆ.
ವಿಸ್ಡನ್ ಅಲ್ಮನ್ಯಾಕ್ ಪ್ರತಿಷ್ಠಿತ ವಾರ್ಷಿಕ ಪುಸ್ತಕದಲ್ಲಿ ಕ್ರಿಕೆಟ್ ಕ್ಷೇತ್ರದ ಐತಿಹಾಸಿಕ ಘಟನೆಗಳನ್ನು ದಾಖಲಿಸಲಾಗುತ್ತದೆ. ಈ ಹಿಂದೆ 2000 ಇಸವಿಯಿಂದ 2011ರ ವರೆಗೆ ಶ್ರೀಲಂಕಾ ಕ್ರಿಕೆಟ್ನ ದಿಗ್ಗಜ ಆಟಗಾರ ಮುತ್ತಯ್ಯ ಮುರುಳೀಧರನ್ ದಶಕ ಒಂದರಲ್ಲಿ 335 ವಿಕೆಟ್ ಪಡೆಯುವ ಮೂಲಕ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದೀಗ ಕೊಹ್ಲಿಗೆ ಈ ಪ್ರಶಸ್ತಿ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.